(ನ್ಯೂಸ್ ಕಡಬ) newskadaba.com ಜು. 26. ರಾಂಚಿ: ಜಾರ್ಖಂಡ್ನಲ್ಲಿ ಶನಿವಾರ ಮುಂಜಾನೆ ನಡೆದ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ 3 ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಜಾರ್ಖಂಡ್ನ ಗುಮ್ಲಾ ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಿಪಿಐ-ಮಾವೋವಾದಿಗಳ ವಿಭಜಿತ ಗುಂಪಾದ ಜಾರ್ಖಂಡ್ ಜನ ಮುಕ್ತಿ ಪರಿಷತ್ (ಜೆಜೆಎಂಪಿ) ಸದಸ್ಯರು ಘಾಗ್ರಾ ಅರಣ್ಯದಲ್ಲಿ ಒಟ್ಟುಗೂಡಿದ್ದು, ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಲು ಯೋಜಿಸುತ್ತಿದ್ದರು. ಈ ವೇಳೆ ಇದರ ಮಾಹಿತಿ ಪಡೆದ ಭದ್ರತಾ ಪಡೆಗಳು ಗುಪ್ತಚರ ಮಾಹಿತಿಯನ್ನಾಧರಿಸಿ ದಿಢೀರ್ ದಾಳಿ ನಡೆಸಿವೆ.










