ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75ರ ಮೇಲೆ ಗುಡ್ಡ ಕುಸಿತ ಬೆಂಗಳೂರು- ಮಂಗಳೂರು ಸಂಚಾರ ಬಂದ್



(ನ್ಯೂಸ್ ಕಡಬ) newskadaba.com ಜು. 28. ವಿಪರೀತವಾಗಿ ಸುರಿಯುತ್ತಿರುವ ಭಾರೀ ಮಳೆಗೆ ರಾಷ್ಟ್ರೀಯ ಹೆದ್ದಾರಿ 75 ರ ಮೇಲೆ ಗುಡ್ಡ ಕುಸಿತಗೊಂಡ ಪರಿಣಾಮ ಬೆಂಗಳೂರು-ಮಂಗಳೂರು ಸಂಚಾರ ಬಂದ್ ಆದ ಘಟನೆ ಮಣ್ಣಗುಡ್ಡೆ ಎಂಬಲ್ಲಿ ನಡೆದಿದೆ.







 

ರಸ್ತೆಗೆ ರಾಶಿ ರಾಶಿ ಮಣ್ಣು ಹಾಗೂ ಮರ ಬಿದ್ದಿದ್ದರಿಂದ ಸೋಮವಾರ ಬೆಳಗಿನ ಜಾವದಿಂದ ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು. ಮಣ್ಣು ತೆರವು ಕಾರ್ಯಾಚರಣೆ ಬಳಿಕ ಸದ್ಯ ವಾಹನಗಳು ಸಂಚರಿಸುತ್ತಿವೆ ಎನ್ನಲಾಗಿದೆ. ಕಳೆದ ವಾರ ಕೂಡ ಅದೇ ಜಾಗದಲ್ಲಿ ಗುಡ್ಡ ಕುಸಿತವಾಗಿದ್ದು, ಸ್ಥಳೀಯರು ಅವೈಜ್ಞಾನಿಕ ಕಾಮಗಾರಿ ವಿರುದ್ಧ ಅಕ್ರೋಶ ಹೊರಹಾಕಿದ್ದಾರೆ.






error: Content is protected !!
Scroll to Top