‘ಪಹಲ್ಗಾಮ್ ದಾಳಿ ಮಾಡಿದ ಮೂವರು ಉಗ್ರರನ್ನು ಎನ್‌ಕೌಂಟರ್‌ ಮಾಡಲಾಗಿದೆ’- ಅಮಿತ್‌ ಶಾ ಘೋಷಣೆ

(ನ್ಯೂಸ್ ಕಡಬ) newskadaba.com, ಜು. 29. ಇಂದು ಲೋಕಸಭಾ ಅಧಿವೇಶನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ. ಪಹಲ್ಗಾಮ್ ದಾಳಿಗೆ ಕಾರಣರಾಗಿದ್ದ ಮೂವರು ಉಗ್ರರನ್ನು ಆಪರೇಷನ್ ಮಹಾದೇವ ಕಾರ್ಯಾಚರಣೆಯಲ್ಲಿ ಎನ್​ಕೌಂಟರ್ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿ ನಡೆದ ದಿನವೇ ಏಪ್ರಿಲ್ 22ರಂದು ಆಪರೇಷನ್ ಮಹಾದೇವ್ ಅನ್ನು ಪ್ರಾರಂಭಿಸಲಾಯಿತು ಎಂದು ಅಮಿತ್ ಶಾ ಲೋಕಸಭೆಯಲ್ಲಿ ಮಾಹಿತಿ ನೀಡಿದ್ದಾರೆ.

ಆ ಸಂಜೆ ಶ್ರೀನಗರ ಉನ್ನತ ಮಟ್ಟದ ಭದ್ರತಾ ಸಭೆ ನಡೆಸಲಾಯಿತು. ಅಲ್ಲಿ ಭಯೋತ್ಪಾದಕರು ದೇಶ ಬಿಟ್ಟು ಪಲಾಯನ ಮಾಡಲು ಬಿಡಬಾರದು ಎಂದು ನಿರ್ಧರಿಸಲಾಯಿತು. ಅದರಿಂದ ಆರಂಭವಾಗಿದ್ದೇ ಆಪರೇಷನ್ ಮಹಾದೇವ್ ಕಾರ್ಯಾಚರಣೆ ಎಂದು ಅಮಿತ್ ಶಾ ಮಾಹಿತಿ ನೀಡಿದ್ದಾರೆ.

Scroll to Top