(ನ್ಯೂಸ್ ಕಡಬ) newskadaba.com ಕಡಬ, ಜು. 30. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮತ್ತು ಅಮೆರಿಕದ ನಾಸಾ ಜಂಟಿಯಾಗಿ ಅಭಿವೃದ್ಧಿಪಡಿಸಿರುವ ನಾಸಾ – ಇಸ್ರೋ ಸಿಂಥೆಟಿಕ್ ಅಪರ್ಚರ್ ರೇಡಾರ್ ನಿಸಾರ್ ಉಪಗ್ರಹ ಇಂದು ಶ್ರೀಹರಿಕೋಟಾದಿಂದ ಉಡಾವಣೆಗೆ ಸಜ್ಜಾಗಿದೆ.
ʻನಿಸಾರ್ʼ ಭಾರತೀಯ ಕಾಲಮಾನದ ಪ್ರಕಾರ ಇಂದು ಸಂಜೆ 5:40ಕ್ಕೆ ಇಸ್ರೋದ GSLV-F16 ಉಪಗ್ರಹದ ಬೆನ್ನೇರಿ ಬಾಹ್ಯಾಕಾಶಕ್ಕೆ ತೆರಳಲಿದೆ. ಈ ಉಪಗ್ರಹವು ಶ್ರೀಹರಿಕೋಟದಿಂದ ಉಡಾವಣೆ ಆಗುತ್ತಿರುವ 102ನೇ ಉಪಗ್ರಹವಾಗಿದೆ. ಹವಾಮಾನ ಬದಲಾವಣೆ, ನೈಸರ್ಗಿಕ ವಿಕೋಪ ನಿರ್ವಹಣೆ ಮತ್ತು ಕೃಷಿ ಕ್ಷೇತ್ರಗಳಿಗೆ ಅಮೂಲ್ಯವಾದ ಮಾಹಿತಿ ಒದಗಿಸಲಿದೆ. ಅಲ್ಲದೇ ನಿರ್ಗಲ್ಲು, ಹಿಮಫಲಕಗಳ ಬದಲಾವಣೆ, ಮಣ್ಣಿನಲ್ಲಿರುವ ತೇವಾಂಶ, ಪ್ರವಾಹ, ಅರಣ್ಯ ನಾಶ, ಬೆಳೆಯ ಆರೋಗ್ಯ, ನಗರೀಕರಣ ಮತ್ತು ಸೌಕರ್ಯಗಳ ಬದಲಾವಣೆ ಮುಂತಾದ ವಿಷಯಗಳನ್ನು ಒದಗಿಸಲಿದೆ. ಇದು ಭಾರತ-ಅಮೆರಿಕ ಸಹಭಾಗಿತ್ವದಲ್ಲಿ ಒಂದು ಮಹತ್ವದ ಹೆಜ್ಜೆಯಾಗಿದೆ.
ಕಕ್ಷೆಯತ್ತ ರಾಕೆಟ್‌ನ ಪ್ರಯಾಣ ಬಹುತೇಕ 19 ನಿಮಿಷ ತೆಗೆದುಕೊಳ್ಳಲಿದೆ. ಆ ಬಳಿಕ, ನಿಸಾರ್ ಉಪಗ್ರಹವನ್ನು ಅದರ ಉದ್ದೇಶಿತ-747 ಸನ್ ಸಿಂಕ್ರೊನಸ್ ಕಕ್ಷೆಯಲ್ಲಿ ಅಳವಡಿಸಲಾಗುತ್ತದೆ.













