ಧರ್ಮಸ್ಥಳ ಪ್ರಕರಣ : ಮೊಹಾಂತಿ ಕೇಂದ್ರ ಸೇವೆಗೆ ಹೋದರೆ ಎಸ್‌‍ಐಟಿಗೆ ಬೇರೆ ಅಧಿಕಾರಿ ನೇಮಕ



(ನ್ಯೂಸ್ ಕಡಬ) newskadaba.com, ಜು. 30. ಧರ್ಮಸ್ಥಳ ಸುತ್ತಮುತ್ತ ಭಾಗದಲ್ಲಿ ಶವಗಳನ್ನು ಹೂತಿಟ್ಟಿರುವ ಆರೋಪದ ತನಿಖೆಗಾಗಿ ರಚಿಸಲಾಗಿರುವ ಎಸ್‌‍ಐಟಿಯ ಮುಖ್ಯಸ್ಥ ಪ್ರಣಬ್‌ ಮೊಹಾಂತಿಯವರನ್ನು ಕೇಂದ್ರ ಸೇವೆಗೆ ಕರೆಸಿಕೊಂಡರೆ ಎಸ್‌‍ಐಟಿಗೆ ಬೇರೆ ಅಧಿಕಾರಿಯನ್ನು ನೇಮಿಸಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.







ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಣಬ್‌ ಮೊಹಂತಿ ಕೇಂದ್ರ ಸೇವೆಗೆ ಆಯ್ಕೆಯಾಗುವುದಾದರೆ ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಿ ಮುಂದುವರೆಯುವುದಾಗಿ ಪರಮೇಶ್ವರ್‌ ಹೇಳಿದರು. ಕಾನೂನು ಪ್ರಕಾರ, ಯಾವೆಲ್ಲಾ ಅಂಶಗಳಿವೆ ಎಂಬುದನ್ನು ಪರಿಶೀಲಿಸಲಾಗುತ್ತದೆ. ಪ್ರಣಬ್‌ ಮೊಹಂತಿ ಕೇಂದ್ರ ಸೇವೆಗೆ ನಿಯೋಜನೆಗೊಂಡರೂ ಕೂಡ ಎಸ್‌‍ಐಟಿ ತನಿಖೆಯನ್ನು ಮುಂದುವರೆಸಬಹುದೇ ಎಂಬುದರ ಬಗ್ಗೆಯೂ ಪರಿಶೀಲಿಸಲಾಗುತ್ತಿದೆ ಎಂದರು






error: Content is protected !!
Scroll to Top