ಧರ್ಮಸ್ಥಳ ಕೇಸ್ ವಿಚಾರದಲ್ಲಿ ಸುಳ್ಳು ಸುದ್ಧಿ ಹರಡಿದರೆ ಹುಷಾರ್, ಗೃಹ ಸಚಿವರ ಮಹತ್ವದ ಸಭೆ



(ನ್ಯೂಸ್ ಕಡಬ) newskadaba.com, . 01: ಧರ್ಮಸ್ಥಳ ಬುರುಡೆ ಪ್ರಕರಣ ಸಂಬಂಧ ಹಲವು ಸುಳ್ಳು ಸುದ್ದಿಗಳು ಸೋಶಿಯಲ್ ಮೀಡಿಯಾ ಸೇರಿದಂತೆ ಹಲವು ವೇದಿಕೆಗಳಲ್ಲಿ ಹರಡಲಾಗುತ್ತಿದೆ ಅನ್ನೋ ಗಂಭೀರ ಆರೋಪಗಳು ಕೇಳಿಬರುತ್ತಿದೆ. ಇದರ ಬೆನ್ನಲ್ಲೇ ಗೃಹ ಸಚಿವ ಜಿ.ಪರಮೇಶ್ವರ್ ನೇತೃತ್ವದಲ್ಲಿ ಮಹತ್ವದ ಸಭ ನಡೆಸಿ ಹಲವು ನಿರ್ಣಯ ಕೈಗೊಳ್ಳಲಾಗಿದೆ. ಪೊಲೀಸ್ ಮಹಾನಿರ್ದೇಶಕ, ಡಿಜಿಪಿ, ಮುಖ್ಯ ಕಾರ್ಯದರ್ಶಿ ಸೇರಿದಂತೆ ಹಲವು ಹಿರಿಯ ಪೊಲೀಸ್ ಅಧಿಕಾರಿಗಳು ಈ ಸಭೆಯಲ್ಲಿ ಪಾಲ್ಗೊಂಡಿದ್ದರು. ಧರ್ಮಸ್ಥಳ ಪ್ರಕರಣ ಸಂಬಂಧ ಸುಳ್ಳು ಸುದ್ದಿ ಹರಡಿದರೆ ಕಠಿಣ ಶಿಕ್ಷೆ ಗುರಿಪಡಿಸಲು ಸರ್ಕಾರ ಮುಂದಾಗಿದೆ. ಫೇಕ್ ನ್ಯೂಸ್‌ಗಳ ಮೇಲೆ ನಿಗಾಹಿಸಲು ಸರ್ಕಾರ ಮುಂದಾಗಿದೆ.







ರಾಜ್ಯ ಸರ್ಕಾರ ಈಗಾಗಲೇ ಫೇಕ್ ನ್ಯೂಸ್ ತಡೆಗೆ ಹಲವು ಕ್ರಮಗಳನ್ನು ಕೈಗೊಂಡಿದೆ. ಇದರ ನಡುವೆ ಧರ್ಮಸ್ಥಳ ಪ್ರಕರಣದಲ್ಲಿ ಹಲವು ಅಂತೆ ಕಂತೆಗಳು, ಆರೋಗಳು ಗಂಭೀರವಾಗಿ ಕೇಳಿಬರುತ್ತಿದೆ. ಎಸ್ಐಟಿ ತನಿಖೆ, ಹೂತಿಟ್ಟ ಶವ ಅಗೆಯುವ ಕಾರ್ಯಾಚರಣೆ, ದೂರುದಾರ ಸೇರಿದಂತೆ ಹಲವು ಪ್ರಕರಣಗಳು, ಘಟನೆಗಳ ಕುರಿತು ಗಂಭೀರ ಆರೋಪಗಳು ಕೇಳಿಬರುತ್ತಿದೆ. ಸುಳ್ಳು ಸುದ್ದಿ ಹರಡುತ್ತಿರುವ ಸೋಶಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್ ಹಾಗೂ ಇತರ ವೇದಿಕೆಗಳ ವಿರುದ್ಧ ಹದ್ದಿನ ಕಣ್ಣಿಡಲು ಮಹತ್ವದ ಸಭೆಯಲ್ಲಿ ನಿರ್ಧರಿಸಲಾಗಿದೆ.






error: Content is protected !!
Scroll to Top