(ನ್ಯೂಸ್ ಕಡಬ) newdkadaba.com, ಆ. 02 ಬೆಂಗಳೂರು: ಬೆಂಗಳೂರು ಮೆಟ್ರೋ ಇತಿಹಾಸದಲ್ಲೇ ಮೊದಲ ಬಾರಿಗೆ ಯಶಸ್ವಿಯಾಗಿ ಮಾನವ ಅಂಗಾಂಗ ಸಾಗಣೆ ಮಾಡಲಾಗಿದೆ.
ಹೌದು.. ಕರ್ನಾಟಕದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿ ಮಾನವ ಅಂಗಾಂಗವನ್ನು ನಮ್ಮ ಮೆಟ್ರೋ ಮೂಲಕ ವೈದೇಹಿ ಆಸ್ಪತ್ರೆಯಿಂದ ಆರ್.ಆರ್.ನಗರದ ಸ್ಪರ್ಶ ಆಸ್ಪತ್ರೆಗೆ ಸಾಗಿಸಲಾಯಿತು. ನಮ್ಮ ಮೆಟ್ರೋದಲ್ಲಿ ಮಾನವ ಯಕೃತ್ತನ್ನು ಶಸ್ತ್ರಚಿಕಿತ್ಸೆಗಾಗಿ ಸಾಗಿಸಲು ಸಹಕಾರ ನೀಡಿದೆ.
ಶುಕ್ರವಾರ, ಆಗಸ್ಟ್ 1, 2025ರ ರಾತ್ರಿ 8:38ಕ್ಕೆ, ಯಕೃತ್ತನ್ನು ವೈದ್ಯರೊಬ್ಬರು ಮತ್ತು ಏಳು ಮಂದಿ ವೈದ್ಯಕೀಯ ಸಿಬ್ಬಂದಿಯೊಂದಿಗೆ ವೈದೇಹಿ ಆಸ್ಪತ್ರೆಯಿಂದ ವೈಟ್ಫೀಲ್ಡ್ ಮೆಟ್ರೋ ನಿಲ್ದಾಣಕ್ಕೆ ಆಂಬ್ಯುಲೆನ್ಸ್ ಮೂಲಕ ಸುರಕ್ಷಿತವಾಗಿ ಸಾಗಿಸಲಾಯಿತು.
ಮೆಟ್ರೋ ನಿಲ್ದಾಣಕ್ಕೆ ತಲುಪಿದ ತಕ್ಷಣ, ಸಹಾಯಕ ಭದ್ರತಾ ಅಧಿಕಾರಿ (ASO) ಮತ್ತು ಮೆಟ್ರೋ ಸಿಬ್ಬಂದಿ ತಂಡವನ್ನು ಸ್ವೀಕರಿಸಿ, ದಾಖಲೆ ಕಾರ್ಯ ಮತ್ತು ಭದ್ರತಾ ಪರಿಶೀಲನೆಗಳನ್ನು ಸಂಯೋಜಿಸಿದರು.













