(ನ್ಯೂಸ್ ಕಡಬ) newskadaba.com, ಆ.05: ಕರ್ನಾಟಕದ 29 ಜಿಲ್ಲೆಗಳಲ್ಲಿ ಒಂದು ವಾರ ಭಾರೀ ವರ್ಷಧಾರೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಹಿನ್ನಲೆ ಧಾರವಾಡ, ಶಿವಮೊಗ್ಗ, ರಾಯಚೂರು, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕಲಬುರ್ಗಿ, ಯಾದಗಿರಿ, ಬೀದರ್, ಕೊಪ್ಪಳ, ಹಾವೇರಿ, ವಿಜಯಪುರ, ಗದಗ, ಧಾರವಾಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉಳಿದಂತೆ ತುಮಕೂರು, ಉಡುಪಿ, ದಕ್ಷಿಣ ಕನ್ನಡ, ಮೈಸೂರು, ಚಿಕ್ಕಬಳ್ಳಾಪುರ, ಮಂಡ್ಯ, ಚಿಕ್ಕಮಗಳೂರು, ಕೋಲಾರ, ಹಾಸನ, ಕೋಲಾರ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.













