(ನ್ಯೂಸ್ ಕಡಬ) newskadaba.com, ಆ.05: ಈಡೇರಿಸಲಾಗದ ಬೇಡಿಕೆಯನ್ನು ಈಡೇರಿಸಿ ಅನ್ನೋದು ಸರಿಯಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದಾರೆ. ಸಾರಿಗೆ ನೌಕರರು ಸರ್ಕಾರದ ಪರಿಸ್ಥಿತಿಯನ್ನು ಕೂಡ ಗಮನದಲ್ಲಿಟ್ಟುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಸಾರಿಗೆ ನೌಕರರು ಕೇಳಿರುವ ಬೇಡಿಕೆಯಲ್ಲಿ ಯಾವುದೇ ತಪ್ಪಿಲ್ಲ. ಆದರೆ, ಸಾರಿಗೆ ನೌಕರರು ಹಠ ಮಾಡುವುದು ಸರಿಯಲ್ಲ. ಸಾರ್ವಜನಿಕರ ಹಿತ ಕಾಪಾಡುವುದು ಮುಖ್ಯ. ಸಾರಿಗೆ ನೌಕರರು ಅರ್ಥ ಮಾಡಿಕೊಳ್ಳಬೇಕು ಎಂದಿದ್ದಾರೆ.













