(ನ್ಯೂಸ್ ಕಡಬ) newskadaba.com, ಆ.05: ಸಾರಿಗೆ ನೌಕರರ ಬೇಡಿಕೆ ಈಡೇರಿಸದೇ ಇದ್ದಲ್ಲಿ ಕರ್ನಾಟಕ ಬಂದ್ಗೆ ಕರೆ ನೀಡುತ್ತೇವೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.
ರಾಮನಗರದಲ್ಲಿ ಮಾತನಾಡಿದ ಅವರು, ಇದು ಸಾರಿಗೆ ನೌಕರರ ಬಹಳ ವರ್ಷದ ಬೇಡಿಕೆಯಾಗಿದೆ. ಅವರ ಸಮಸ್ಯೆಯನ್ನು ಯಾವ ಸರ್ಕಾರವೂ ಆಲಿಸಿಲ್ಲ. ಸರ್ಕಾರಿ ನೌಕರರ 36 ತಿಂಗಳ ಸಂಬಳ ಏಕೆ ಬಾಕಿ ಇಟ್ಟುಕೊಂಡಿದ್ದೀರಿ. ಹೀಗೆ ಮಾಡಿದರೆ ನೌಕರರು ಜೀವನ ಹೇಗೆ ನಡೆಯಬೇಕು ಎಂದು ಪ್ರಶ್ನಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ, ಸಚಿವ ರಾಮಲಿಂಗಾರೆಡ್ಡಿ ಅವರು ಈ ಕೂಡಲೇ ಸಾರಿಗೆ ನೌಕರರ ಬೇಡಿಕೆಯನ್ನು ಈಡೇರಿಸಬೇಕು. ನೌಕರರ ಬೇಡಿಕೆ ಈಡೇರಿಸದಿದ್ದಲ್ಲಿ ಅವರೊಂದಿಗೆ ನಾವು ಸೇರಿ ಹೋರಾಟ ಮಾಡುತ್ತೇವೆ. ಮುಂದಿನ ದಿನಗಳಲ್ಲಿ ಕರ್ನಾಟಕ ಬಂದ್ಗೆ ಕರೆ ನೀಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.













