(ನ್ಯೂಸ್ ಕಡಬ) newskadaba.com, ಆ.06: ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, 5 ಜಿಲ್ಲೆಗಳಿಗೆ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕೊಡಗು, ಚಿಕ್ಕಮಗಳೂರು, ಉಡುಪಿ, ಹಾಸನ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಗಾಳಿಯ ವೇಗ ಗಂಟೆಗೆ 30-40 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಈ ಹಿನ್ನೆಲೆ ಕರಾವಳಿ ಭಾಗದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.













