(ನ್ಯೂಸ್ ಕಡಬ) newskadaba.com, ಆ.06: ಪಂಜಾಬ್ ಮೊಹಾಲಿಯ ಆಮ್ಲಜನಕ ಸ್ಥಾವರದಲ್ಲಿ ಭಾರೀ ಸ್ಪೋಟ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಗರದ 9ನೇಹಂತದಲ್ಲಿರುವ ಕಾರ್ಖಾನೆಯಲ್ಲಿ ಸ್ಪೋಟ ಸಂಭವಿಸಿದೆ. ಘಟನೆಯ ಮಾಹಿತಿ ತಿಳಿದ ಕೂಡಲೇ ವೈದ್ಯಕೀಯ ತಂಡಗಳು, ಪೊಲೀಸರು ಹಾಗೂ ಜಿಲ್ಲಾಡಳಿತ ಸಿಬ್ಬಂದಿ ಘಟನಾ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಚರಣೆ ನಡೆಸಿದ್ದಾರೆ.
ಗಾಯಾಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.










