ಸುಧಾಕರ್‌ ಹೆಸರು ಬರೆದಿಟ್ಟು ಕಾರು ಚಾಲಕ ಆತ್ಮಹತ್ಯೆ



(ನ್ಯೂಸ್‌ ಕಡಬ) newskadaba.com, ಆ.07: ಬಿಜೆಪಿ ಸಂಸದ ಕೆ.ಸುಧಾಕರ್ಅವರ ಹೆಸರನ್ನು ಡೆತ್ನೋಟ್ನಲ್ಲಿ ಉಲ್ಲೇಖಿಸಿ ಕಾರು ಚಾಲಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.







ಚಿಕ್ಕಬಳ್ಳಾಪುರದ ಬಾಪೂಜಿ ನಗರದ ನಿವಾಸಿ ಬಾಬು(32)ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಜಿಲ್ಲಾ ಪಂಚಾಯತಿ ಸಿಇಒ ಕಾರು ಚಾಲಕನಾಗದ್ದರು. ಚಿಕ್ಕಬಳ್ಳಾಪು ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜಿಲ್ಲಾ ಪಂಚಾಯತಿ ಸಭಾಂಗಣದ ಹಿಂಭಾಗದಲ್ಲಿರುವ ಮರದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.






ನನ್ನ ಸಾವಿಗೆ ಸಂಸದ ಡಾ.ಕೆ.ಸುಧಾಕರ್ಕಾರಣ. ಚಿಕ್ಕಕಾಡಿಗಾನಹಳ್ಳಿ ನಾಗೇಶ್ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ 25 ಲಕ್ಷ ರೂ. ಹಣ ಪಡೆದು ವಂಚಿಸಿದ್ದಾರೆ. ಅಲ್ಲದೇ, ಜಿಲ್ಲಾ ಪಂಚಾಯತಿ ಲೆಕ್ಕ ಸಹಾಯಕರ ವಿರುದ್ದ ಕೂಡ ಡೆತ್ನೋಟ್ನಲ್ಲಿ ಬಾಬು ಹಲವು ಆರೋಪ ಮಾಡಿದ್ದಾರೆ.

ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!
Scroll to Top