ಸುಳ್ಯ: ಇಂಜಿನಿಯರಿಂಗ್ ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ



(ನ್ಯೂಸ್ ಕಡಬ) newskadaba.com ಸುಳ್ಯ, ಎ.13. ಇಲ್ಲಿನ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೋರ್ವಳು ತನ್ನ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಗುರುವಾರದಂದು ನಡೆದಿದೆ.







ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಸುಳ್ಯ ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ವಿಭಾಗದ ಪ್ರಥಮ ಬಿ.ಇ. ವಿದ್ಯಾರ್ಥಿನಿ, ಬೆಟ್ಟಂಪಾಡಿ ನಿವಾಸಿ ವಿಶ್ವನಾಥ ಆಚಾರ್ಯ ಎಂಬವರ ಪುತ್ರಿ ಶಿವಾನಿ ಎನ್.ವಿ‌. ಎಂದು ಗುರುತಿಸಲಾಗಿದೆ. ಈಕೆ ಗುರುವಾರದಂದು ತನ್ನ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಪುತ್ತೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






error: Content is protected !!
Scroll to Top