(ನ್ಯೂಸ್ ಕಡಬ) newskadaba.com, ಆ.11 : ಬೆಂಗಳೂರು: ಇಂದಿನಿಂದ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗಲಿದೆ. ಸರ್ಕಾರ ವರ್ಸಸ್ ವಿಪಕ್ಷಗಳ ನಡುವೆ ಮಹಾಕದನಕ್ಕೆ ಅಧಿವೇಶನ ವೇದಿಕೆಯಾಗುವ ಸಾಧ್ಯತೆ ಇದೆ.
ಇಂದಿನಿಂದ ಆಗಸ್ಟ್ 22 ರವರೆಗೂ ಅಧಿವೇಶನ ನಡೆಯಲಿದೆ. ವಿಪಕ್ಷಗಳಿಗೆ ಸರ್ಕಾರವನ್ನ ಕಟ್ಟಿ ಹಾಕಲು ಸಾಲು ಸಾಲು ಅಸ್ತ್ರಗಳಿವೆ. ಸರ್ಕಾರದ ವೈಫಲ್ಯಗಳನ್ನ ಬಿಚ್ಚಿಟ್ಟು ಸರ್ಕಾರವನ್ನ ಎಕ್ಸ್ಪೋಸ್ ಮಾಡಲು ವಿಪಕ್ಷಗಳ ಸಿದ್ಧತೆ ನಡೆಸಿವೆ.
ಭಾನುವಾರ ಬಿಜೆಪಿ-ಜೆಡಿಎಸ್ ಪ್ರಮುಖ ನಾಯಕರಿಂದ ಸದನದಲ್ಲಿ ಹೋರಾಟದ ಬಗ್ಗೆ ಚರ್ಚೆಯ ವಿಷಯಗಳ ಪ್ರಸ್ತಾಪವಾಗಿದೆ. ಸರ್ಕಾರದ ವಿರುದ್ಧ ಒಟ್ಟಾಗಿ ಹೋರಾಟ ನಡೆಸಲು ಎರಡು ಪಕ್ಷಗಳಿಂದ ಚರ್ಚೆ ನಡೆದಿದೆ ಎನ್ನಲಾಗಿದೆ. ವಿಪಕ್ಷಗಳ ಅಸ್ತ್ರಕ್ಕೆ ಪ್ರತಿ ಅಸ್ತ್ರ ಹೂಡಲು ಸರ್ಕಾರದಿಂದಲೂ ಸಿದ್ಧತೆ ನಡೆದಿದೆ.













