(ನ್ಯೂಸ್ ಕಡಬ) newskadaba.com, ಆ.12: ಕಾಂಗ್ರೆಸ್ ಹಿರಿಯ ನಾಯಕ ಕೆ.ಎನ್.ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಲಾಗಿದೆ. ಈ ಬಗ್ಗೆ ಸರಕಾರಕ್ಕೆ ರಾಜ್ಯಪಾಲರಿಂದ ಅಧಿಕೃತ ಪತ್ರ ರವಾನಿಸಲಾಗಿದೆ.
ಸಚಿವ ಕೆಎನ್ ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ಕೈ ಬಿಡುವಂತೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭುಶಂಕರ್ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿದ್ದಾರೆ. ಕೆಎನ್ ರಾಜಣ್ಣ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ರಾಜಭವನದಿಂದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಹೋಗಿದೆ.
ಹೈಕಮಾಂಡ್ ಸೂಚನೆ ನೀಡಿದ ಬೆನ್ನಲ್ಲೇ ಶಾಸಕ ಕೆಎನ್ ರಾಜಣ್ಣ ಅವರು ಸೋಮವಾರ (ಆ.11) ಮಧ್ಯಾಹ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಕೆ.ಎನ್.ರಾಜಣ್ಣ ನೀಡಿದ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಗೀಕರಿಸಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಳುಹಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೆಎನ್ ರಾಜಣ್ಣ ರಾಜೀನಾಮೆಯನ್ನು ಅಂಗೀಕರಿಸಿದರು.k.n raja













