ಇಂದಿನ ಹವಮಾನ ವರದಿ; ರಾಜ್ಯದಲ್ಲಿ ಮುಂದುವರಿದ ಮಳೆ- ನಾಳೆಯಿಂದ ಎಲ್ಲ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಣೆ!



(ನ್ಯೂಸ್‌ ಕಡಬ) newskadaba.com, ಆ.12:   ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ಮುಂದುವರಿದಿದ್ದು, ಇಂದು ಕೂಡ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಾಳೆಯಿಂದ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚಾಗಲಿದ್ದು, ರಾಜ್ಯದ ಎಲ್ಲ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.







ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಧಾರವಾಡ, ಹಾವೇರಿ, ಶಿವಮೊಗ್ಗ, ಗದಗ, ಬೆಳಗಾವಿ, ಬಾಗಲಕೋಟೆ, ಕಲಬುರಗಿ ಸೇರಿದಂತೆ ಬಹುತೇಕ ಕಡೆಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಈ ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಸಾಧ್ಯತೆ ಇದ್ದು, ಜನ ಸಾಮಾನ್ಯರಿಗೆ ತೊಂದರೆಯಾಗಬಹುದು ಎಂದು ಹವಾಮಾನ ಇಲಾಖೆ ಹೇಳಿದೆ.






ಸಾರ್ವಜನಿಕರು ಮತ್ತು ಪ್ರಯಾಣಿಕರು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ. ನಾಳೆಯ ಯೆಲ್ಲೋ ಅಲರ್ಟ್ ಅನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ತಿಳಿಸಲಾಗಿದೆ.

error: Content is protected !!
Scroll to Top