(ನ್ಯೂಸ್ ಕಡಬ) newskadaba.com ಆ.13 ರಾಹುಲ್ ಗಾಂಧಿ ಅವರ ನಿರ್ದೇಶನದ ಮೇಲೆ ರಾಜಣ್ಣರನ್ನ ಸಂಪುಟದಿಂದ ಕೈ ಬಿಡಲಾಗಿದೆ ಶಾಸಕಾಂಗ ಪಕ್ಷದ ಸಭೆಗೆ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಸಭೆಯ ಆರಂಭದಲ್ಲೇ ಕೆ.ಎನ್ ರಾಜಣ್ಣ ತಲೆದಂಡ ಕುರಿತು ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ, ರಾಜಣ್ಣರನ್ನ ಸಚಿವ ಸಂಪುಟದಿಂದ ವಜಾ ಮಾಡಬೇಕಾದ ಪರಿಸ್ಥಿತಿ ನಿರ್ಮಾಣ ಆಯ್ತು. ಅವರು ಮಾತನಾಡಿದ ಉದ್ದೇಶ ಬೇರೆಯೇ ಆಗಿದ್ದರೂ ಹೇಳಿದ ರೀತಿ ಸರಿ ಇರಲಿಲ್ಲ. ಆ ತಪ್ಪಿನಿಂದಾಗಿ ರಾಜಣ್ಣರನ್ನ ಸಂಪುಟದಿಂದ ಕೈ ಬಿಡಬೇಕಾಯಿತು. ರಾಹುಲ್ ಗಾಂಧಿ ಅವರ ನಿರ್ದೇಶನದ ಮೇಲೆ ರಾಜಣ್ಣರನ್ನ ಸಂಪುಟದಿಂದ ಕೈಬಿಡಲಾಗಿದೆ ಎಂದು ಹೇಳಿದರು. ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಗೆ ರಾಜಣ್ಣ ವ್ಯಂಗ್ಯಭರಿತ ಹೇಳಿಕೆ ಕೊಟ್ಟಿದ್ದರು. ನಮ್ಮ ಕಾಲದಲ್ಲೇ ಅಲ್ವಾ ವೋಟರ್ ಲಿಸ್ಟ್ ಆಗಿದ್ದು, ಆಗೇನು ಕಣ್ಣುಮುಚ್ಚಿ ಕುಳಿತಿದ್ರಾ? ಮಾತನಾಡಿದ್ರೆ ಏನೇನೋ ಆಗುತ್ತೆ. ಈಗ ದೂರಿದ್ರೆ ಏನರ್ಥ? ಎಂದು ಹೇಳಿಕೆ ಕೊಟ್ಟಿದ್ದರು. ಇದು ಹೈಕಮಾಂಡ್ ಸಿಟ್ಟಿಗೆ ಕಾರಣವಾಗಿತ್ತು. ರಾಜಣ್ಣ ಈ ರೀತಿ ವಿವಾದಾತ್ಮಕ ಹೇಳಿಕೆ ನೀಡುವುದು ಹೊಸದೆನಲ್ಲ. ಈ ಹಿಂದೆಯೂ ಹಲವು ಬಾರಿ ಸರ್ಕಾರ ಮತ್ತು ಸಚಿವರು, ಹೈಕಮಾಂಡ್ ನಾಯಕರ ವರ್ತನೆಯನ್ನು ಟೀಕಿಸಿದ್ದರು. ಈ ಸಂಬಂಧ ಹೈಕಮಾಂಡ್ ಹಂತಕ್ಕೆ ದೂರು ಹೋಗಿತ್ತು
ಬೆಂಗಳೂರು: ರಾಹುಲ್ ಗಾಂಧಿ ನಿರ್ದೇಶನದ ಮೇಲೆ ರಾಜಣ್ಣರನ್ನು ಸಂಪುಟದಿಂದ ಕೈ ಬಿಡಲಾಗಿದೆ’- ಸಿಎಂ ಸಿದ್ದರಾಮಯ್ಯ













