(ನ್ಯೂಸ್ ಕಡಬ) newskadaba.com ಆ.13 ರಾಜಸ್ಥಾನದಲ್ಲಿ ಭಾರೀ ಅಪಘಾತ ಸಂಭವಿಸಿದ್ದು 11 ಭಕ್ತರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಖಾತು ಶ್ಯಾಮ್ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಗಾಯಾಳುಗಳಲ್ಲಿ ಒಂಬತ್ತು ಜನರನ್ನು ಚಿಕಿತ್ಸೆಗಾಗಿ ಜೈಪುರಕ್ಕೆ ಕಳುಹಿಸಲಾಗಿದೆ ಮತ್ತು ಮೂವರನ್ನು ಸ್ಥಳೀಯ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಯಾಣಿಕರ ಪಿಕ್-ಅಪ್ ವಾಹನ ಮತ್ತು ಟ್ರೇಲರ್ ಟ್ರಕ್ ನಡುವೆ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಘಟನೆ ಕುರಿತು ಮಾಹಿತಿ ನೀಡಿರುವ ಎಸ್ಪಿ ಸಾಗರ್ ರಾಣಾ, “ಖಾತು ಶ್ಯಾಮ್ ದೇವಸ್ಥಾನದಿಂದ ಬರುವ ಭಕ್ತರು ಅಪಘಾತಕ್ಕೀಡಾದ ಬಗ್ಗೆ ಮಾಹಿತಿ ಬಂದಿದ್ದು, ಇಲ್ಲಿಯವರೆಗೆ 11 ಮಂದಿ ಸಾವನ್ನಪ್ಪಿದ್ದಾರೆ. ಸುಮಾರು ಏಳರಿಂದ ಎಂಟು ಜನರನ್ನು ಜೈಪುರದ ಎಸ್ಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ಹೇಳಿದರು. ರಾಜಸ್ಥಾನದ ಮುಖ್ಯಮಂತ್ರಿ ಭಜನ್ಲಾಲ್ ಶರ್ಮಾ ಭಕ್ತರ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಡೌಸಾದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಜೀವಹಾನಿ ಸುದ್ದಿ ಅತ್ಯಂತ ದುಃಖಕರವಾಗಿದೆ . ಗಾಯಾಳುಗಳಿಗೆ ತ್ವರಿತ ಮತ್ತು ಸರಿಯಾದ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಲಾಗಿದೆ .













