(ನ್ಯೂಸ್ ಕಡಬ) newskadaba.com, ಆ.15: ದೇಶಾದ್ಯಂತ ಇಂದು ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ.
ಧ್ವಜಾರೋಹಣಕ್ಕೂ ಮುನ್ನ ಪ್ರಧಾನಿ ಮೋದಿ ಅವರು ದೆಹಲಿಯ ರಾಜ್ಘಾಟ್ನಲ್ಲಿ ಮಹಾತ್ಮ ಗಾಂಧಿ ಅವರಿಗೆ ಗೌರವ ಸಲ್ಲಿಸಿದರು. ಬಳಿಕ ಧ್ವಜಾರೋಹಣಕ್ಕೆ ಕೆಂಪುಕೋಟೆಗೆ ಆಗಮಿಸಿದರು. ಪ್ರಧಾನಿ ಮೋದಿ ಅವರನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸ್ವಾಗತಿಸಿದರು.
ನಂತರ ಪ್ರಧಾನಿ ಮೋದಿ ಅವರು ಧ್ವಜಾರೋಹಣ ನೇರವೇರಿಸಿದರು. ಈ ವೇಳೆ ಭಾರತೀಯ ವಾಯುಪಡೆಯ ಎರಡು MI-17 ಹೆಲಿಕಾಪ್ಟರ್ಗಳು ಕೆಂಪುಕೋಟೆಯ ಮೇಲೆ ಹಾರಾಟ ನಡೆಸಿ ಪುಷ್ಪವೃಷ್ಟಿಗೈದವು.










