ಮನೆಯೊಂದರಲ್ಲಿ ಅನುಮಾನಾಸ್ಪದ ವಸ್ತು ಸ್ಪೋಟ: ಓರ್ವ ಸಾವು



(ನ್ಯೂಸ್‌ ಕಡಬ) newskadaba.com, ಆ.15: ಮನೆಯೊಂದರಲ್ಲಿ ಅನುಮಾನಾಸ್ಪದ ವಸ್ತು ಸ್ಪೋಟಗೊಂಡು ಓರ್ವ ಬಾಲಕ ಮೃತಪಟ್ಟು, ಹಲವರು ಗಾಯಗೊಂಡ ಘಟನೆ ಬೆಂಗಳೂರಿನ ವಿಲ್ಸನ್ಗಾರ್ಡನ್ ಚಿನ್ನಯ್ಯಪಾಳ್ಯದಲ್ಲಿ ನಡೆದಿದೆ.







ಸ್ಪೋಟದ ತೀವ್ರತೆಗೆ ಮೊದಲನೇ ಮಹಡಿಯ ಮನೆ ಗೋಡೆಯ ಛಾವಣಿ ಕುಸಿದು ಬಿದ್ದಿದೆ. 8ಕ್ಕೂ ಅಧಿಕ ಮನೆಗಳಿಗೆ ಹಾನಿಯುಂಟಾಗಿದೆ.






ಘಟನೆಯಲ್ಲಿ ಗಾಯಗೊಂಡವರನ್ನು ಸಂಜಯ್ಗಾಂಧಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಆಡುಗೋಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!
Scroll to Top