ಏಳುಮಲೆ ಸಿನಿಮಾ ರಿಲೀಸ್‌ಗೆ ಡೇಟ್‌ ಫಿಕ್ಸ್‌

(ನ್ಯೂಸ್‌ ಕಡಬ) newskadaba.com, ಆ.17:‌ ತರುಣ್ ಸುಧೀರ್ನಿರ್ಮಾಣದ ಏಳುಮಲೆ ಸಿಸಿಮಾದ ಹಾಡುಗಳು ಹಾಗೂ ಟೈಟಲ್ಟೀಸರ್ಮೂಲಕ ಈಗಾಗಲೇ ಪ್ರೇಕ್ಷಕರಲ್ಲಿ ನಿರೀಕ್ಷೆ ಹೆಚ್ಚಿಸಿದೆ. ನಡುವೆ ಚಿತ್ರತಂಡ ಸಿಹಿಸುದ್ದಿ ನೀಡಿದೆ. ಏಳುಮಲೆ ಸಿನಿಮಾದ ಬಿಡುಗಡೆ ದಿನಾಂಕ ನಿಗದಿಯಾಗಿದೆ. ಸಿನಿಮಾ ಸೆ.5ರಂದು ತೆರೆಕಾಣಲಿದೆ. ಕನ್ನಡ, ತಮಿಳು ಹಾಗೂ ತೆಲುಗು ಭಾಷೆಯಲ್ಲಿ ಚಿತ್ರ ಬಿಡುಗಡೆಯಾಗಲಿದೆ. ‌

ಕರ್ನಾಟಕತಮಿಳುನಾಡು ನಡುವಿನ ಗಡಿಭಾಗದ ಪ್ರೇಮಕಥೆಯಾಗಿರುವ ಏಳುಮಲೆ ಸಿನಿಮಾದಲ್ಲಿ ನಟಿ ರಕ್ಷಿತಾ ಸಹೋದರ ರಾಣಾ ಕನ್ನಡ ಹುಡುಗ ಹರೀಶ್ಪಾತ್ರದಲ್ಲಿ ನಟಿಸುತ್ತಿದ್ದಾರೆ. ರಿಯಾಲಿಟಿ ಶೋ ಮೂಲಕ ಮನೆ ಮಾತಾಗಿರುವ ಪ್ರಿಯಾಂಕಾ ಆಚಾರ್ತಮಿಳು ಹುಡುಗಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಸಿನಿಮಾವು ನೈಜ ಘಟನೆಯನ್ನು ಆಧರಿಸಿದ್ದು, ಭಾವನಾತ್ಮಕವಾದ ಕಥೆಯನ್ನು ಒಳಗೊಂಡಿರಲಿದೆ. ಚೌಕ ಹಾಗೂ ಕಾಟೇರ ಸಿನಿಮಾಗಳ ನಿರ್ದೇಶಕ ತರುಣ್‌ ಸುಧೀರ್‌ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಅಟ್ಲಾಂಟಾ ನಾಗೇಂದ್ರ ಅವರು ಈ ಚಿತ್ರದ ಸಹ ನಿರ್ಮಾಪಕರಾಗಿದ್ದಾರೆ.

Scroll to Top