(ನ್ಯೂಸ್ ಕಡಬ) newskadaba.com ಆ. 18. ಜಾನುವಾರುಗಳಿಗೆ ಮೇವು ಸಂಗ್ರಹಿಸುತ್ತಿದ್ದ ವ್ಯಕ್ತಿಯೋರ್ವನ ಮೇಲೆ 20 ಕೋತಿಗಳು ದಿಢೀರ್ ದಾಳಿ ನಡೆಸಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವ ಘಟನೆ ಬಿಹಾರದ ಮಧುಬಾನಿ ಜಿಲ್ಲೆಯ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟವರನ್ನು ರಾಮನಾಥ್ ಚೌಧರಿ ಎಂದು ಗುರುತಿಸಲಾಗಿದೆ. ನಿವೃತ್ತ ಗುಮಾಸ್ತರಾಗಿದ್ದ ರಾಮನಾಥ್ ಚೌಧರಿಯವರ ರಕ್ಷಣೆಗೆ ಜನರು ಗುಂಪು ಸೇರುವ ವೇಳೆಗೆ ಚೌಧರಿ ತೀವ್ರವಾಗಿ ಗಾಯಗೊಂಡಿದ್ದರು. ತಕ್ಷಣವೇ ಮಧುಬಾನಿ ಸದರ್ ಆಸ್ಪತ್ರೆಗೆ ಅವರನ್ನು ಕರೆದೊಯ್ಯಲಾಯಿತಾದರೂ, ಆ ವೇಳೆಗಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.












