(ನ್ಯೂಸ್ ಕಡಬ) newskadaba.com, ಆ.18: ಆಕ್ಸಿಯಂ-4 ಮಿಷನ್ ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ಕೊಟ್ಟ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಶುಭಾಂಶು ಶುಕ್ಲಾ ಅವರು, ಭೂಮಿಗೆ ಮರಳಿದ ನಂತರ ಮೊದಲ ಬಾರಿಗೆ ತಾಯ್ನಾಡು ಭಾರತಕ್ಕೆ ಮರಳಿದ್ದಾರೆ.
ಶುಭಾಂಶು ಶುಕ್ಲಾ ಅವರು ಇಂದು ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ತಮ್ಮ ಅನುಭವ ಹಂಚಿಕೊಳ್ಳಲಿದ್ದಾರೆ. ಪ್ರಧಾನಿ ಮೋದಿ ಭೇಟಿ ಬಳಿಕ ಶುಕ್ಲಾ ಅವರು ಲಕ್ನೋಗೆ ಪ್ರಯಾಣಿಸುವ ಸಾಧ್ಯತೆ ಇದೆ.
ಆಕ್ಸಿಯಂ-4 ಮಿಷನ್ ಭಾಗವಾಗಿ ಜೂ.25ರಿಂದ ಜು.15ರವರೆಗೆ ಐಎಸ್ಎಸ್ನಲ್ಲಿ ಕಳೆದಿದ್ದ ಶುಕ್ಲಾ. ಹಲವು ಯಶಸ್ವಿ ಪ್ರಯೋಗಗಳನ್ನು ನಡೆಸಿ ಭೂಮಿಗೆ ವಾಪಾಸ್ಸಾಗಿದ್ದಾರೆ.










