(ನ್ಯೂಸ್ ಕಡಬ) newskadaba.com, ಆ.18: ಸೆ.1ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರಿಗೆ ಭೇಟಿ ನೀಡಲಿದ್ದಾರೆ.
ಮಾನಸ ಗಂಗೋತ್ರಿಯ ಅಖಿಲ ಭಾರತ ವಾಕ್ ಹಾಗೂ ಶ್ರವಣ ಸಂಸ್ಥೆ ವಜ್ರ ಮಹೋತ್ಸವ ಸಮಾರಂಭದಲ್ಲಿ ಅವರು ಭಾಗವಹಿಸಲಿದ್ದಾರೆ. ದೆಹಲಿಯಿಂದ ಬೆಂಗಳೂರಿಗೆ ಆಗಮಿಸಲಿರುವ ರಾಷ್ಟ್ರಪತಿಗಳು ಅಲ್ಲಿಂದ ಮೈಸೂರು ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ.
ದ್ರೌಪದಿ ಮುರ್ಮು ಅವರು ಮೈಸೂರಿಗೆ ಆಗಮಿಸುತ್ತಿರುವುದು ಇದು 2ನೇ ಬಾರಿ. 2022ರಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಲು ದ್ರೌಪದಿ ಮುರ್ಮು ಅವರು ಮೈಸೂರಿಗೆ ಆಗಮಿಸಿದ್ದರು.













