ಹೆಬ್ಬಾಳ ಫ್ಲೈಓವರ್‌ ಲೋಕಾರ್ಪಣೆ ಮಾಡಿದ ಸಿಎಂ, ಡಿಸಿಎಂ



(ನ್ಯೂಸ್‌ ಕಡಬ) newskadaba.com, ಆ.18: ಹೆಬ್ಬಾಳ ಜಂಕ್ಷನ್‌ನಲ್ಲಿ ಕೆ.ಆರ್‌.ಪುರಂ ಕಡೆಯಿಂದ ಮೇಖ್ರಿ ವೃತ್ತದ ಕಡೆಗೆ ಸಂಚರಿಸಲು ನಿರ್ಮಿಸಿರುವ ಮೇಲ್ಸೇತುವೆಯನ್ನು ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ಲೋಕಾರ್ಪಣೆಗೊಳಿಸಿದರು.







ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಬರೆದುಕೊಂಡ ಡಿಕೆ ಶಿವಕುಮಾರ್‌, ಹೆಬ್ಬಾಳ ಜಂಕ್ಷನ್‌ನಲ್ಲಿ ಕೆ.ಆರ್‌.ಪುರಂ ಕಡೆಯಿಂದ ಮೇಖ್ರಿ ವೃತ್ತದ ಕಡೆಗೆ ಸಂಚರಿಸಲು ನಿರ್ಮಿಸಿರುವ ಮೇಲ್ಸೇತುವೆಯನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಲೋಕಾರ್ಪಣೆಗೊಳಿಸಲಾಯಿತು ಎಂದು ತಿಳಿಸಿದರು.






ಇಂದಿನಿಂದ ಹೆಬ್ಬಾಳದ ಹೊಸ ಮೇಲ್ಸೇತುವೆ ರ‍್ಯಾಂಪ್ ಸಾರ್ವಜನಿಕರ ವಾಹನಗಳ ಸಂಚಾರಕ್ಕೆ ಮುಕ್ತವಾಗಿದೆ. 80 ಕೋಟಿ ರೂ. ವೆಚ್ಚದಲ್ಲಿ 700 ಮೀಟರ್ ಉದ್ದದ ಹೆಬ್ಬಾಳ ಫ್ಲೈಓವರ್ ನಿರ್ಮಾಣದಿಂದ ಹೆಬ್ಬಾಳದ ಟ್ರಾಫಿಕ್ ದಟ್ಟಣೆ ಶೇ.30ರಷ್ಟು ನಿವಾರಣೆಯಾಗುವ ನಿರೀಕ್ಷೆ ಇದೆ ಎಂದರು.

ಹೆಬ್ಬಾಳ ಮೇಲ್ಸೇತುವೆಯಲ್ಲಿ ನನ್ನ ಯೆಜ್ಡಿ ರೋಡ್‌ಕಿಂಗ್‌ ಬೈಕ್ ಸವಾರಿ ಮಾಡುವ ಮೂಲಕ ಕಾಲೇಜು ದಿನಗಳನ್ನು ಮೆಲುಕು ಹಾಕಿದೆ. ಬೆಂಗಳೂರಿನ ನಾಗರಿಕರೇ, ಜಾಗತಿಕವಾಗಿ ಗುರುತಿಸಿಕೊಂಡಿರುವ ನಮ್ಮ ಬೆಂಗಳೂರು ನಗರಕ್ಕೆ ಹೊಸರೂಪವನ್ನು ನೀಡಲು ನಾವು ಬದ್ಧರಿದ್ದೇವೆ ಎಂದು ಹೇಳಿದರು.

error: Content is protected !!
Scroll to Top