ಬೆಂಗಳೂರು: ಕೂಡಲೇ ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್ ಬದಲಾಯಿಸಿ- ಬಿ.ವೈ. ವಿಜಯೇಂದ್ರ ಒತ್ತಾಯ



(ನ್ಯೂಸ್‌ ಕಡಬ) newskadaba.com, ಆ.18 ಬೆಂಗಳೂರು: ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟನ್ನೂ ಕೂಡಲೇ ಬದಲಾಯಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ರಾಜ್ಯ ಸರ್ಕಾರವನ್ನು ಸೋಮವಾರ ಒತ್ತಾಯಿಸಿದ್ದಾರೆ.







ವಿಧಾನಸೌಧದಲ್ಲಿ ಮಾತಾಡಿದ ಅವರು, ಕಳೆದ ಆಗಸ್ಟ್ ನಲ್ಲಿ ಜಲಾಶಯದ 19ನೇ ಕ್ರಸ್ಟ್ ಗೇಟ್ ಮುರಿದುಬಿದ್ದಿತ್ತು. ಹೀಗಾಗಿ ಸಾವಿರಾರು ಕ್ಯುಸೆಕ್ ನೀರು ಹರಿದು ವ್ಯರ್ಥವಾಗಿದೆ. ಅದಕ್ಕೆ ಶಾಶ್ವತ ಪರಿಹಾರ ನೀಡಿದೆ ವಿಳಂಬ ಮಾಡಿದ್ದರಿಂದ ನೀರಿನ ಒತ್ತಡ ಇತರ ಗೇಟ್‌ಗಳ ಮೇಲೆ ಬಿದ್ದಿದೆ. ಇದರ ಪರಿಣಾಮವಾಗಿ ಎಲ್ಲ 33 ಕ್ರಸ್ಟ್ ಗೇಟನ್ನೂ ತಕ್ಷಣ ಬದಲಿಸಬೇಕಾದ ಪರಿಸ್ಥಿತಿ ಒದಗಿಬಂದಿದೆ ಎಂದರು.






ಕೊಪ್ಪಳ, ರಾಯಚೂರು, ಬಳ್ಳಾರಿ ಮೊದಲಾದ ಜಿಲ್ಲೆಗಳ ರೈತರು ಪ್ರತಿವರ್ಷ 2 ಬೆಳೆ ಬೆಳೆಯುತ್ತಿದ್ದರು. ಆದರೆ, ರಾಜ್ಯ ಸರ್ಕಾರ ಅಥವಾ ಸಂಬಂಧಿತ ಸಚಿವರು, ತುಂಗಭದ್ರಾ ಜಲಾಶಯ ನೀರಾವರಿ ಮಂಡಳಿಯಲ್ಲಿ ಚರ್ಚೆ ಮಾಡಿ, ಒತ್ತಡ ಹಾಕದ ಪರಿಣಾಮವಾಗಿ ಈ ಬಾರಿ ರೈತರು ಒಂದೇ ಬೆಳೆಗೆ ತೃಪ್ತಿ ಪಡುವ ಸಂದರ್ಭ ಬಂದಿದೆ ಎಂದು ಟೀಕಿಸಿದರು

.ಸ್ವಾತಂತ್ರ‍್ಯ ಹೋರಾಟಗಾರರ ಮಾಸಾಶನ ಕೊಡುವ ಯೋಗ್ಯತೆಯೂ ಈ ಸರ್ಕಾರಕ್ಕೆ ಇಲ್ಲ. ಅವರು ಸ್ವಾತಂತ್ರ‍್ಯ ಹೋರಾಟಗಾರರ ಮಾಸಾಶನ 4.85 ಕೋಟಿ ರೂ. ಮೊತ್ತವನ್ನು ಕೊಡದೇ ತಡೆ ಹಿಡಿದಿದ್ದಾರೆ. ಇದನ್ನು ಪ್ರಶ್ನಿಸಿದರೆ, ರಾಜ್ಯದ ಆರ್ಥಿಕ ಪರಿಸ್ಥಿತಿ ಬಹಳ ಚೆನ್ನಾಗಿದೆ ಎಂದು ಸಿದ್ದರಾಮಯ್ಯನವರು ಹೇಳುತ್ತಾರೆ. ಮುಖ್ಯಮಂತ್ರಿ ಪರಿಹಾರ ನಿಧಿಗೆ ಹಣ ಬಿಡುಗಡೆ ಮಾಡದಂಥ ದುಸ್ಥಿತಿಗೆ ಬಂದು ನಿಂತಿದೆ ಎಂದು ವಾಗ್ದಾಳಿ ನಡೆಸಿದರು.

 

error: Content is protected !!
Scroll to Top