ಹಿಂದುಳಿದ ವರ್ಗಗಳ ಹಾಸ್ಟೆಲ್ ಪ್ರವೇಶ: ಅವಧಿ ವಿಸ್ತರಣೆ



(ನ್ಯೂಸ್‌ ಕಡಬ) newskadaba.com ಆ. 19. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ (ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ./ ಪ.ವರ್ಗದ ಸಾಮಾನ್ಯ ಪದವಿ ಕೋರ್ಸ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು  ಆಗಸ್ಟ್ 25 ರವರೆಗೆ ಅವಧಿ ವಿಸ್ತರಿಸಲಾಗಿದೆ.
ಪ್ರವರ್ಗ-1, ಎಸ್.ಸಿ.& ಎಸ್.ಟಿ. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ – ರೂ. 2.50 ಲಕ್ಷ, ಪ್ರವರ್ಗ-2ಎ, 2ಬಿ, 3ಎ, 3ಬಿ ಇತರೆ ಹಿಂದುಳಿದ ವರ್ಗ ಹಾಗೂ ಇತರೆ ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ರೂ. 1 ಲಕ್ಷ.
ವೆಬ್‍ಸೈಟ್ https://shp.karnataka.gov.in/ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‍ಸೈಟ್  www.bcwd.karnataka.gov.in/ ನ್ನು ನೋಡಬಹುದು.
ಹೆಚ್ಚಿನ ಮಾಹಿತಿಗೆ ಅಥವಾ ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwd.helpline@gmail.com ಗೆ ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ ತಾಲ್ಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ (ಸಹಾಯವಾಣಿ ಸಂಖ್ಯೆ 8050770004 ಮತ್ತು 8050770005) ಇವರನ್ನು ಅಗತ್ಯ  ದಾಖಲೆಗಳೊಂದಿಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







error: Content is protected !!
Scroll to Top