(ನ್ಯೂಸ್ ಕಡಬ) newskadaba.com ಆ. 19. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿಯಾಗಿರುವ ನಟ ದರ್ಶನ್ ರನ್ನು ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವ ವಿಚಾರಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಆ.23ಕ್ಕೆ ಮುಂದೂಡಲಾಗಿದೆ.
ವಿಚಾರಣೆ ನಡೆಸಿದ ನ್ಯಾಯಾಧೀಶರು, ದರ್ಶನ್ ಪರ ವಕೀಲರಿಗೆ ಅಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿ ಮುಂದಿನ 23ಕ್ಕೆ ವಿಚಾರಣೆಯನ್ನು ಮುಂದೂಡಿದರು. ಇನ್ನು ಸರ್ಕಾರಿ ಪರ ವಕೀಲರು ಹಾಜರಾಗಿ, ಕೊಲೆ ಕೇಸ್ ನಲ್ಲಿ ಜಾಮೀನು ಸಿಗುವ ಹಿಂದೆ ದರ್ಶನ್ ಸೇರಿದಂತೆ ಇತರೆ ಆರೋಪಿಗಳು ಯಾವ್ಯಾವ ಜೈಲಿನಲ್ಲಿದ್ರು ಅಲ್ಲಿಗೆ ಶಿಫ್ಟ್ ಮಾಡಬೇಕು ಅಂತ ಅರ್ಜಿ ಸಲ್ಲಿಸಿದ್ದರು.
ಆದರೆ ಜಾಮೀನು ರದ್ದಾದ ದಿನವೇ ದರ್ಶನ್ ಪರ ವಕೀಲರು ಬಳ್ಳಾರಿಗೆ ಶಿಫ್ಟ್ ಮಾಡುವುದಾದರೆ ನಮ್ಮ ವಾದವನ್ನು ಅಲಿಸಬೇಕು ಅಂತ ಮನವಿ ಮಾಡಿಕೊಂಡಿದ್ದ ಹಿನ್ನೆಲೆ ದರ್ಶನ್ ಪರ ವಕೀಲರಿಗೆ ಅವಕಾಶ ನೀಡಲಾಗಿದೆ.













