Karnataka Rains: ಆ.27ರ ಬಳಿಕ ಮತ್ತೆ ಹೆಚ್ಚಲಿದೆ ಮಳೆಯ ಅಬ್ಬರ



(ನ್ಯೂಸ್‌ ಕಡಬ) newskadaba.com, ಆ.21:‌‌ ಇಂದಿನಿಂದ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಕೊಂಚ ಬಿಡುವು ಪಡೆದಿದೆ. ಆದರೆ. .27ರಿಂದ ಮತ್ತೆ ಮಳೆಯ ಅಬ್ಬರ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.





ಮಳೆಯ ಹಿನ್ನೆಲೆ ಬೆಳಗಾವಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ಘೋಷಣೆ ಮಾಡಲಾಗಿದೆ.






ಹಾಸನ ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

error: Content is protected !!
Scroll to Top