ನತದೃಷ್ಟ ಕನ್ನಡಿಗರು ಮಲಯಾಳಿಗಷ್ಟು ಅದೃಷ್ಟವಂತರಲ್ಲ: ಆರ್.ಅಶೋಕ್



(ನ್ಯೂಸ್‌ ಕಡಬ) newskadaba.com, ಆ.21:ಕಾಂಗ್ರೆಸ್ಸಂಸದೆ ಪ್ರಿಯಾಂಕಾ ಗಾಂಧಿ ಪ್ರತಿನಿಧಿಸುವ ಕೇರಳದ ವಯನಾಡು ಲೋಕಸಭಾ ಕ್ಷೇತ್ರಕ್ಕೆ 10 ಕೋಟಿ ರೂ. ವಿಶೇಷ ಅನುದಾನ ಘೋಷಿಸಿರುವ ಕರ್ನಾಟಕ ಕಾಂಗ್ರೆಸ್ಸರ್ಕಾರದ ನಡೆಯನ್ನು ಬಿಜೆಪಿ ಟೀಕಿಸಿದೆ.





ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಬರೆದುಕೊಂಡಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.‌ಅಶೋಕ್‌, ಪ್ರಿಯಾಂಕಾ ಗಾಂಧಿ ಪ್ರತಿನಿಧಿಸುವ ಕೇರಳದ ವಯನಾಡು ಲೋಕಸಭಾ ಕ್ಷೇತ್ರಕ್ಕೆ 10 ಕೋಟಿ ರೂಪಾಯಿ ವಿಶೇಷ ಅನುದಾನ ನೀಡಿರುವ ಕೇರಳ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆಗಳು ಎಂದು ಟೀಕಿಸಿದ್ದಾರೆ.






ಕೇರಳದ ಮುಖ್ಯಮಂತ್ರಿ ಸಿದ್ದರಾಮಯ್ಯನವರಂತಹ ಹೃದಯ ವೈಶಾಲ್ಯ ಇರುವ, ಸಂವೇದನಾಶೀಲ ಮುಖ್ಯಮಂತ್ರಿ ಕರ್ನಾಟಕದಲ್ಲೂ ಇದ್ದಿದ್ದರೆ, ಎಲ್ಲ ಕ್ಷೇತ್ರಗಳಿಗೂ ಭರಪೂರ ಅನುದಾನ ಸಿಕ್ಕುತ್ತಿತ್ತು. ನತದೃಷ್ಟ ಕನ್ನಡಿಗರು ಮಲಯಾಳಿಗಷ್ಟು ಅದೃಷ್ಟವಂತರಲ್ಲ ಬಿಡಿ ಎಂದು ಹೇಳಿದ್ದಾರೆ.

error: Content is protected !!
Scroll to Top