ಬಿ.ಎಲ್‌ ಸಂತೋಷ್‌ ವಿರುದ್ದ ಅವಹೇಳನ: ಮಹೇಶ್‌ ಶೆಟ್ಟಿ ತಿಮರೋಡಿ ಪೊಲೀಸ್‌ ವಶಕ್ಕೆ



(ನ್ಯೂಸ್‌ ಕಡಬ) newskadaba.com, ಆ.21:‌ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ಸಂತೋಷ್ವಿರುದ್ದ ಅವೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಮಹೇಶಶೆಟ್ಟಿ ತಿಮರೋಡಿ ಅವರನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡದಿದ್ದಾರೆ.





ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದ ವಿಡಿಯೋವೊಂದರಲ್ಲಿ ತಿಮರೋಡಿ ಬಿಎಲ್ಸಂತೋಷವಿರುದ್ದ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಬಗ್ಗೆ ರಾಜೀವ್ಕುಲಾಲ್ಎಂಬವರು ನೀಡಿದ ದೂರಿನ ಮೇರೆಗೆ ಬ್ರಹ್ಮಾವರ ಠಾಣೆಯಲ್ಲಿ ಬಿಎಸ್ಎನ್ 196(1), 352,353(2) ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಭಾರೀ ಹೈಡ್ರಾಮದ ನಂತರ ಪೊಲೀಸರು ತಿಮರೋಡಿ ಅವರನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.






8 ವಾಹನಗಳಲ್ಲಿ ತಿಮರೋಡಿ ನಿವಾಸಕ್ಕೆ ತೆರಳಿದ್ದ 30 ಪೊಲೀಸರ ತಂಡ ಉಜಿರೆಯಲ್ಲಿರುವ ಅವರ ಮನೆಯಲ್ಲೇ ವಶಕ್ಕೆ ಪಡೆದುಕೊಂಡಿದೆ. ಇದಕ್ಕೂ ಮೊದಲು ಮನೆಯ ಮುಂಭಾಗದಲ್ಲಿ ಜಮಾಯಿಸಿದ್ದ ತಿಮರೋಡಿ ಬೆಂಬಲಿಗರು ಬಂಧಿಸದಂತೆ ಆಗ್ರಹಿಸಿದರು. ಏನೇ ವಿಚಾರಣೆ ಇದ್ದರೂ ಇಲ್ಲೇ ನಡೆಸಬೇಕು ಎಂದು ಪಟ್ಟು ಹಿಡಿದರು. ವೇಳೆ ಗಿರೀಶ್ಮಟ್ಟಣ್ಣನರ್ಕೂಡ ಕಾರಣ ಕೇಳಿ ಪೊಲೀಸರೊಂದಿಗೆ ವಾಗ್ವಾದ ನಡೆಸಿದರು.

ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಬೆಂಬಲಿಗರೊಂದಿಗೂ ಮಾತುಕತೆ ನಡೆಸಿದ ಪೊಲೀಸರು ಮಹೇಶ್‌ ಶೆಟ್ಟಿ ತಿಮರೋಡಿ ಅವರನ್ನು ವಶಕ್ಕೆ ಪಡೆದು ಖಾಸಗಿ ಕಾರಿನಲ್ಲಿ ಕರೆದೊಯ್ದಿದ್ದಾರೆ.

error: Content is protected !!
Scroll to Top