(ನ್ಯೂಸ್ ಕಡಬ) newskadaba.com, ಆ.22: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಿಧಾನಸಭೆಯಲ್ಲಿ ಆರ್ಎಸ್ಎಸ್ ಗೀತೆಯನ್ನು ಹಾಡುವ ಮೂಲಕ ಗಮನ ಸೆಳೆದಿದ್ದಾರೆ.
ಆ.21ರಂದು ವಿಧಾನಸಭೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತದ ಬಗ್ಗೆ ಚರ್ಚೆ ನಡೆಯುತ್ತಿತ್ತು. ಈ ವೇಳೆ ವಿಪಕ್ಷ ನಾಯಕ ಆರ್. ಅಶೋಕ್, ಆರ್ಸಿಬಿ ಗೆಲುವಿನಲ್ಲಿ ಡಿಕೆ ಶಿವಕುಮಾರ್ ಪಾಲ್ಗೊಂಡಿರುವ ಬಗ್ಗೆ ಪ್ರಸ್ತಾಪ ಮಾಡಿದರು. ಇದಕ್ಕೆ ಉತ್ತರಿಸಿದ ಡಿಕೆಶಿ, ನಾನು ಕ್ರಿಕೆಟ್ ಅಭಿಮಾನಿ, ಕೆಎಸ್ಸಿಎ ಸದಸ್ಯ, ಕ್ರೀಡಾಂಗಣಕ್ಕೆ ಹೋಗಿದ್ದೆ, ಕಪ್ಗೂ ಮುತ್ತಿಕ್ಕಿದೆ ಎಂದರು.
ಈ ವೇಳೆ ಆರ್ಎಸ್ಎಸ್ ಚಡ್ಡಿ ಹಾಕಿದ್ರಲ್ಲ ಎಂದು ಅಶೋಕ್ ಟಾಂಗ್ ಕೊಟ್ಟರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಡಿಕೆಶಿ, ನಮಸ್ತೇ ಸದಾ ವತ್ಸಲೇ ಮಾತೃಭೂಮೇ ಗೀತೆಯನ್ನು ಹಾಡಿ, ಈಗ ಆ ವಿಚಾರದ ಬಗ್ಗೆ ಚರ್ಚೆ ಬೇಡ ಎಂದು ಹೇಳಿದರು.













