ಗೇಮಿಂಗ್ ಆ್ಯಪ್‌ಗಳಿಗೆ ಅಕ್ರಮ ಹಣ ವರ್ಗಾವಣೆ : ಚಿತ್ರದುರ್ಗದ ಕಾಂಗ್ರೆಸ್‌ ಶಾಸಕ ಸಿಕ್ಕಿಂನಲ್ಲಿ ಇಡಿ ವಶಕ್ಕೆ



(ನ್ಯೂಸ್‌ ಕಡಬ) newskadaba.com, ಆ.22: ಚಿತ್ರದುರ್ಗದ ಕಾಂಗ್ರೆಸ್‌ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರ ಮನೆ ಮೇಲೆ ಇಂದು ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದರ ಬೆನ್ನಲ್ಲೇ ಸಿಕ್ಕಿಂನಲ್ಲಿ ಶಾಸಕರನ್ನ ವಶಕ್ಕೆ ಪಡೆಯಲಾಗಿದೆ.





ತನ್ನ ಒಡೆತನದ ಕಂಪನಿಗಳಿಂದ ಗೇಮಿಂಗ್ ಆ್ಯಪ್‌ಗಳಿಗೆ ಅಕ್ರಮವಾಗಿ ಹಣ ವರ್ಗಾವಣೆ ಅಕ್ರಮ ಆಸ್ತಿ ಮತ್ತು ತೆರಿಗೆ ವಂಚನೆ ಆರೋಪದ ಮೇಲೆ ಶುಕ್ರವಾರ ಶಾಸಕರು, ಅವರ ಸಹೋದರಾದ ಕೆ.ಸಿ ನಾಗರಾಜ ಮತ್ತು ಕೆಸಿ ತಿಪ್ಪೇಸ್ವಾಮಿ ಮನೆಗಳ ಮೇಲೆ ದಾಳಿ ನಡೆದಿದೆ.






ಬೆಂಗಳೂರು, ಚಿತ್ರದುರ್ಗ, ಚಳ್ಳಕೆರೆ, ಗೋವಾ ಸೇರಿದಂತೆ 17 ಕಡೆಗಳಲ್ಲಿ ಏಕಕಾಲಕ್ಕೆ ದಾಳಿಯಾಗಿದ್ದು, ದಾಖಲೆಗಳನ್ನ ಪರಿಶೀಲಿಸಲಾಗುತ್ತಿದೆ. ಗೇಮಿಂಗ್ ಆ್ಯಪ್‌ಗಳಿಗೆ ಅಕ್ರಮವಾಗಿ ಹಣ ವರ್ಗಾವಣೆ, ಅಕ್ರಮ ಆಸ್ತಿ ಮತ್ತು ತೆರಿಗೆ ವಂಚನೆ ಆರೋಪ ಪಪ್ಪಿ ವಿರುದ್ಧ ಕೇಳಿಬಂದಿತ್ತು. ಈ ಕುರಿತು ಗೋವಾದಲ್ಲಿ 2 ಪ್ರಕರಣ ದಾಖಲಾಗಿತ್ತು. ಅಧಿಕಾರಿಗಳ ಶೋಧ ಮುಂದುವರಿದಿದೆ.

ಶಾಸಕರಿಗೆ ಸೇರಿದ ಪಪ್ಪಿ ಟೆಕ್ನಾಲಜಿ, ರತ್ನ ಗೇಮಿಂಗ್ ಸೊಲ್ಯೂಷನ್ಸ್, ರತ್ನ ಗೋಲ್ಡ್, ರತ್ನ ಮಲ್ಟಿ ಸೋರ್ಸ್ ಕಂಪನಿಗಳು ಅಕ್ರಮ ಎಸಗಿವೆ ಎಂದು ಆರೋಪಿಸಲಾಗಿದೆ. ಚಳ್ಳಕೆರೆ ಪಟ್ಟಣದಲ್ಲಿರುವ 4 ಮನೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಇನ್ನೂ ಪಪ್ಪಿ ಅವರೊಂದಿಗೆ ಆರ್ಥಿಕ ವ್ಯವಹಾರ ಹೊಂದಿದ್ದ ಹಿನ್ನೆಲೆ ಕಾಂಗ್ರೆಸ್‌ ಮುಖಂಡೆ ಕುಸುಮಾ ಹನುಮಂತ ರಾಯಪ್ಪ ಅವರ ಮುದ್ದಿಪಾಳ್ಯ ರಸ್ತೆಯಲ್ಲಿರುವ ನಿವಾಸದ ಮೇಲೆ ಇಡಿ ದಾಳಿ ನಡೆದಿದೆ. ಶೋಧ ಮುಂದುವರಿದಿದೆ.

error: Content is protected !!
Scroll to Top