ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶ: ಅರ್ಜಿ ಆಹ್ವಾನ



(ನ್ಯೂಸ್ ಕಡಬ) newskadaba.com ಆ. 23. 2025-26ನೇ ಶೈಕ್ಷಣಿಕ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ಹಾಸ್ಟೆಲ್‍ ಗಳಲ್ಲಿ (ಎಲ್ಲಾ ಮೆಟ್ರಿಕ್ ನಂತರದ ಕೋರ್ಸುಗಳ ವಿದ್ಯಾರ್ಥಿಗಳಿಗೆ) ಆನ್‍ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನ  ಸೆಪ್ಟೆಂಬರ್  15. ಎಸ್.ಎಚ್.ಪಿ (ರಾಜ್ಯ ಹಾಸ್ಟೆಲ್ ಪೋರ್ಟಲ್) ವೆಬ್‍ ಸೈಟ್  https://shp.karnataka.gov.in/ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿಗಳನ್ನು ಸಲ್ಲಿಸುವ ವಿಧಾನ ಮತ್ತು ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ವೆಬ್‍ ಸೈಟ್ https://dom.karnataka.gov.in ಅನ್ನು ವೀಕ್ಷಿಸಿ ಹಾಗೂ ಹತ್ತಿರದ ಜಿಲ್ಲಾ ಮತ್ತು ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







error: Content is protected !!
Scroll to Top