ನಾಡಿನ ಜನತೆಗೆ ಗೌರಿ-ಗಣೇಶ ಹಬ್ಬದ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ



(ನ್ಯೂಸ್‌ ಕಡಬ) newskadaba.com, ಆ.26: ನಾಡಿನಾದ್ಯಂತ ಗೌರಿಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದೆ. ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರು ನಾಡಿನ ಜನತೆಗೆ ಗೌರಿಗಣೇಶ ಹಬ್ಬದ ಶುಭಾಶಯ ತಿಳಿಸಿದ್ದಾರೆ.





ಸಂಬಂಧ ಸಾಮಾಜಿ ಮಾಧ್ಯಮ ಎಕ್ಸ್ನಲ್ಲಿ ಬರೆದುಕೊಂಡ ಅವರು, ನಾಡಿನ ಸಮಸ್ತ ಜನತೆಗೆ ಗೌರಿ – ಗಣೇಶ ಹಬ್ಬದ ಶುಭಾಶಯಗಳು. ಬಡವ ಬಲ್ಲಿದರೆನ್ನದೆ, ಜಾತಿ ಮತಗಳ ಭೇದವಿಲ್ಲದ ಸರ್ವರೂ ಜೊತೆಗೂಡಿ ಆಚರಿಸುವ ಈ ಹಬ್ಬವು ನಾಡಿನಲ್ಲಿ ಸ್ನೇಹ – ಸೌಹಾರ್ದತೆಗಳು ನೆಲೆಸಲು ಪ್ರೇರಣೆಯಾಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.






ಜಲಚರಗಳಿಗೆ, ಪರಿಸರಕ್ಕೆ ಹಾನಿಕಾರಕವಾದ ರಾಸಾಯನಿಕಯುಕ್ತ ಗಣೇಶ ಮೂರ್ತಿಯ ಬದಲಿಗೆ ಮಣ್ಣಿನಿಂದಷ್ಟೇ ಮಾಡಿದ ಪರಿಸರಸ್ನೇಹಿ ಗಣೇಶನನ್ನು ಪೂಜಿಸೋಣ. ಹಬ್ಬವನ್ನು ಸಂಭ್ರಮ – ಸಡಗರದೊಂದಿಗೆ ಆಚರಿಸುವ ಜೊತೆಗೆ ಪರಿಸರ ಕಾಳಜಿಯನ್ನು ಮರೆಯದಿರೋಣ. ವಿಘ್ನನಿವಾರಕನಾದ ಗಣೇಶನು ನಿಮ್ಮೆಲ್ಲಾ ಕಷ್ಟಗಳನ್ನು ಕಳೆದು ಸುಖ – ಸಮೃದ್ಧಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

error: Content is protected !!
Scroll to Top