ಕೆ.ಪಿ.ಟಿ: ಅರೆಕಾಲಿಕ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ



(ನ್ಯೂಸ್ ಕಡಬ) newskadaba.com ಮಂಗಳೂರು, ಆ. 26. ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್, ಮಂಗಳೂರಿನಲ್ಲಿ 2025-26ನೇ ಸಾಲಿನ ಅರೆಕಾಲಿಕ (ಪಾರ್ಟ್ ಟೈಮ್) ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಪ್ರವೇಶಕ್ಕೆ ಮೆಕ್ಯಾನಿಕಲ್ ಇಂಜಿನಿಯರಿಂಗ್ ಹಾಗೂ ಎಲೆಕ್ಟ್ರಿಕಲ್ ಆಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಕೋರ್ಸ್‍ಗಳಿಗೆ ಆಫ್‍ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.







 

ಸಂಬಂಧಪಟ್ಟ ವಿಷಯದಲ್ಲಿ 2 ವರ್ಷಗಳ ತಾಂತ್ರಿಕ ಸೇವಾನುಭವ ಪಡೆದು ಸರ್ಕಾರಿ ಮತ್ತು ಸರ್ಕಾರಿ ಸ್ವಾಮ್ಯದ ಕಾರ್ಖಾನೆ/ ಕೈಗಾರಿಕೆ/ ಸಂಸ್ಥೆಗಳಲ್ಲಿ ಖಾಯಂ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿರುವ ಎಸ್.ಎಸ್.ಎಲ್.ಸಿ ತೇರ್ಗಡೆ ಹೊಂದಿದ ಅರ್ಹ ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ತಾಂತ್ರಿಕ ಶಿಕ್ಷಣ ಇಲಾಖೆಯ ವೆಬ್‍ಸೈಟ್ dtek.karnataka.gov.in ಅಥವಾ dtetech.karnataka.gov.in/kartechnical ಮೂಲಕ ಡೌನ್‍ಲೋಡ್ ಮಾಡಿ ಸೆಪ್ಟೆಂಬರ್ 2 ರೊಳಗಾಗಿ ಮಂಗಳೂರಿನ ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್ ಕಚೇರಿಯಲ್ಲಿ ಅರ್ಜಿಯನ್ನು ಸಲ್ಲಿಸಬಹುದು.






 

ಹೆಚ್ಚಿನ ಮಾಹಿತಿಗೆ ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್, ಮಂಗಳೂರು ಕಚೇರಿ ಸಂಪರ್ಕಿಸಬಹುದು ಎಂದು  ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top