(ನ್ಯೂಸ್ ಕಡಬ) newskadaba.com, ಆ.27: ರಾಜ್ಯದಲ್ಲಿ ಇಂದಿನಿಂದ ಸೆ.1ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ, ಮಲೆನಾಡು ಹಾಗೂ ಕೆಲವು ಒಳನಾಡು ಜಿಲ್ಲೆಗಳಿಗೆ ಆ.29ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ, ಬೀದರ್, ಕಲಬುರ್ಗಿ, ಯಾದಗಿರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ವಿಜಯನಗರ, ತುಮಕೂರು, ಬೆಂಗಳೂರು ನಗರ, ವಿಜಯಪುರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆಯಾಗಿದೆ.
ಇಂದು ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಭಾರೀ ವರ್ಷಧಾರೆತಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಆ.28ರವರೆಗೆ ಗಾಳಿಯ ವೇಗವು ಪ್ರತಿ ಗಂಟೆಗೆ 30-40 ಕಿ.ಮೀ ಇರಲಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಆ.29ರವರೆಗೆ ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.












