ಚಾರ್ಮಾಡಿ ಘಾಟ್‌ ರಸ್ತೆಯಲ್ಲಿ ಇನ್ಮುಂದೆ ವಾಹನ ಸವಾರರಿಗೆ ಹೊಸ ನಿಯಮ

(ನ್ಯೂಸ್‌ ಕಡಬ) newskadaba.com, ಆ.28:‌‌ ರಾಷ್ಟ್ರೀಯ ಹೆದ್ದಾರಿ 173ರ ಚಾರ್ಮಾಡಿ ಘಾಟ್‌ನಲ್ಲಿ ಅಪರಾಧ ಚಟುವಟಿಕೆಗಳು ಹೆಚ್ಚುತ್ತಿರುವ ಹಿನ್ನೆಲೆ ಚಿಕ್ಕಮಗಳೂರು ಪೊಲೀನ್‌ ಇಲಾಖೆ ಅಲರ್ಟ್‌ ಆಗಿದೆ. ಈ ಸಂಬಂಧ ಚಾರ್ಮಾಡಿ ಘಾಟ್‌ನಲ್ಲಿ ರಾತ್ರಿ ವೇಳೆ ನಡೆಯುವ ಅಪರಾಧ ಚಟುವಟಿಕೆಗಳನ್ನು ತಡೆಯಲು ಪೊಲೀಸ್‌ ಇಲಾಖೆ ಹೊಸ ನಿಯಮ ರೂಪಿಸಿದ್ದು, ಈಗಾಗಲೇ ನಿಯಮ ಜಾರಿಯಾಗಿದೆ.

ಕೊಟ್ಟಿಗೆಹಾರ ಚೆಕ್‌ ಪೋಸ್ಟ್‌ನಲ್ಲಿ ಪ್ರತಿ ವಾಹನಗಳ ತಪಾಸಣೆ ಮಾಡುವುದರೊಂದಿಗೆ ಚಾರ್ಮಾಡಿ ಘಾಟ್‌ನಲ್ಲಿ ರಾತ್ರಿ ವೇಳೆ ಐದು ವಾಹನಗಳನ್ನು ಒಟ್ಟಿಗೆ ಕಳುಹಿಸಲಾಗುತ್ತಿದೆ. ಚಾರ್ಮಾಡಿ ಘಾಟ್‌ನಲ್ಲಿ ರಾತ್ರಿ ಸಂಚರಿಸುವ ವಾಹನಗಳಿಗೆ ಈ ಹೊಸ ನಿಯಮ ಅನ್ವಯವಾಗಲಿದೆ.

ಚಾರ್ಮಾಡಿ ಘಾಟ್‌ಗೆ ತೆರಳಲು ರಾತ್ರಿ 12 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೂ ಬರುವ ವಾಹನಗಳನ್ನು ಕೊಟ್ಟಿಗೆಹಾರ ಚೆಕ್‌ಪೋಸ್ಟ್‌ ಬಳಿ ನಿಲ್ಲಿಸಿ 5 ವಾಹನ ಜೊತೆ ಮಾಡಿ ಬಿಡಲಾಗುತ್ತಿದೆ. ರಾತ್ರಿ ವೇಳೆ ಒಂದೊಂದೇ ವಾಹನ ಸಂಚಾರವನ್ನು ಚಿಕ್ಕಮಗಳೂರು ಪೊಲೀಸ್‌ ಇಲಾಖೆ ನಿಷೇಧಿಸಿದೆ. ಅಪರಾಧವನ್ನು ತಡೆಯುವ ನಿಟ್ಟಿನಲ್ಲಿ ಈ ನಿಯಮವನ್ನು ಜಾರಿ ಮಾಡಲಾಗಿದೆ. 24 ಗಂಟೆಯೂ ಚಾರ್ಮಾಡಿ ಘಾಟ್‌ನಲ್ಲಿ ಪೊಲೀಸ್‌ ವಾಹನ ಗಸ್ತು ತಿರುಗುವಂತೆ ಸೂಚಿಸಲಾಗಿದೆ.

Scroll to Top