(ನ್ಯೂಸ್ ಕಡಬ) newskadaba.com ಆ. 28. ಆ್ಯಸಿಡ್ ಸೇವಿಸಿ ಒಂದೇ ಕುಟುಂಬದ ಮೂವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಅಂಬಲತ್ತರ ಸಮೀಪದ ಪಾರಕ್ಕಾಯಿ ಎಂಬಲ್ಲಿ ನಡೆದಿದೆ.
ಮೃತರನ್ನು ಗೋಪಿ, ಪತ್ನಿ ಇಂದಿರಾ ಹಾಗೂ ಪುತ್ರ ರಂಜೇಶ ಎಂದು ಗುರುತಿಸಲಾಗಿದೆ. ಇನ್ನೋರ್ವ ಪುತ್ರ ರಾಕೇಶ್ (27) ಗಂಭೀರ ಸ್ಥಿತಿಯಲ್ಲಿದ್ದು ಕಣ್ಣೂರು ಸರಕಾರಿ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆರ್ಥಿಕ ಮುಗ್ಗಟ್ಟು ಕೃತ್ಯಕ್ಕೆ ಕಾರಣ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ರಂಜೇಶ್ ಹಾಗೂ ರಾಕೇಶ್ ಈ ಹಿಂದೆ ವಿದೇಶದಲ್ಲಿದ್ದು, ಎರಡು ವರ್ಷಗಳ ಹಿಂದೆ ಊರಿಗೆ ಮರಳಿ, ಉದ್ಯಮ ನಡೆಸುತ್ತಿದ್ದರೆನ್ನಲಾಗಿದೆ. ಇದು ಯಶಸ್ವಿಯಾಗಲಿಲ್ಲ. ಇದರಿಂದ ಸಾಲದ ಹೊರೆ ಹೆಚ್ಚಿತ್ತು ಎನ್ನಲಾಗಿದೆ. ಘಟನೆಯ ಕುರಿತು ಅಂಬಲತ್ತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.









