‘s/o ಮುತ್ತಣ್ಣ’ ಸೆಪ್ಟೆಂಬರ್ 12ರಂದು 3 ಭಾಷೆಗಳಲ್ಲಿ ಬಿಡುಗಡೆ!



(ನ್ಯೂಸ್‌ ಕಡಬ) newskadaba.com, ಆ.28: ಪುರಾತನ ಫಿಲಂಸ್ ನಿರ್ಮಾಣದ, ಶ್ರೀಕಾಂತ್ ಹುಣಸೂರು ನಿರ್ದೇಶನದ ಹಾಗೂ ಡೈನಾಮಿಕ್ ಸ್ಟಾರ್ ದೇವರಾಜ್ ಅವರ ದ್ವಿತೀಯ ಪುತ್ರ ಪ್ರಣಮ್ ದೇವರಾಜ್ (Pranam Devaraj) ನಾಯಕನಾಗಿ ಹಾಗೂ “ದಿಯಾ” ಖ್ಯಾತಿಯ ಖುಷಿ ರವಿ ನಾಯಕಿಯಾಗಿ ನಟಿಸಿರುವ “S/O ಮುತ್ತಣ್ಣ” ಚಿತ್ರದ ಟ್ರೇಲರ್ ಇತ್ತೀಚೆಗೆ ವಿಕ್ಟರಿ ಸಿನಿಮಾಸ್ ನಲ್ಲಿ ಬಿಡುಗಡೆಯಾಯಿತು. ಚಿತ್ರತಂಡದ ಸದಸ್ಯರು ಹಾಗೂ ಸಾಕಷ್ಟು ಕನ್ನಡ ಸಿನಿಮಾಸಕ್ತರು ಉಪಸ್ಥಿತರಿದ್ದರು. ನಂತರ ಚಿತ್ರದ ಕುರಿತು ಚಿತ್ರತಂಡದ ಸದಸ್ಯರು ಮಾತನಾಡಿದರು.





ನಮ್ಮ ಚಿತ್ರ ಆಗಸ್ಟ್ 22 ರಂದು ಬಿಡುಗಡೆಯಾಗಬೇಕಿತ್ತು. ಆದರೆ, ನಮ್ಮ ಚಿತ್ರ ನೋಡಿದ ಮಲಯಾಳಂ ವಿತರಕ ಶಾನ್, “S/O ಮುತ್ತಣ್ಣ” ಚಿತ್ರವನ್ನು ಮಲಯಾಳಂ ನಲ್ಲೂ ತೆರೆಗೆ ತರಲು ಮುಂದಾಗಿದ್ದಾರೆ. ಹಾಗಾಗಿ ನಮ್ಮ ಚಿತ್ರವನ್ನು ಚಿತ್ರವನ್ನು ಸೆಪ್ಟೆಂಬರ್ 12ರಂದು ಕನ್ನಡ, ತೆಲುಗು, ಮಲಯಾಳಂ ಭಾಷೆಗಳಲ್ಲಿ ಬಿಡುಗಡೆ ಮಾಡುತ್ತಿದ್ದೇವೆ‌. ಹಾಡುಗಳು ಹಾಗೂ ಟೀಸರ್ ಈಗಾಗಲೇ ಜನರ ಮನಸ್ಸಿಗೆ ಹತ್ತಿರವಾಗಿದೆ. ಟ್ರೇಲರ್ ಕೂಡ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಚಿತ್ರ ಉತ್ತಮವಾಗಿ ಮೂಡಿ ಬರಲು ಸಹಕಾರ ನೀಡಿದ ನಿರ್ಮಾಪಕರಿಗೆ ಹಾಗೂ ಇಡೀ ತಂಡಕ್ಕೆ ಧನ್ಯವಾದ ಎಂದರು ನಿರ್ದೇಶಕ ಶ್ರೀಕಾಂತ್ ಹುಣಸೂರು.






 

 

error: Content is protected !!
Scroll to Top