(ನ್ಯೂಸ್ ಕಡಬ) newskadaba.com, ಆ.29: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸೆ.3ರವರೆಗೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರೀ ಮಳೆಯ ಹಿನ್ನೆಲೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಉತ್ತರ ಕನ್ನಡ, ಕೊಡಗು, ಬೆಳಗಾವಿ, ಚಿಕ್ಕಮಗಳೂರು, ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಧಾರವಾಡ, ಹಾಸನ, ಗದಗ, ವಿಜಯಪುರ, ಹಾವೇರಿ ಹಾಗೂ ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ವರ್ಷಧಾರೆಯಾಗಲಿದೆ. ಉಳಿದಂತೆ ವಿಜಯನಗರ, ಕೊಪ್ಪಳ, ತುಮಕೂರು, ರಾಯಚೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಬೆಂಗಳೂರು ನಗರ, ಮಂಡ್ಯ, ಚಾಮರಾಜನಗರ, ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.












