(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಪ್ರತಿಷ್ಟಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರಿಕ ಸೇವೆ, ಕೆ.ಎ.ಎಸ್ ಗೆಜೆಟೆಡ್ ಪ್ರೊಬೇಷನರ್, ಗ್ರೂಪ್-ಸಿ, ಆರ್.ಆರ್.ಬಿ & ಎಸ್.ಎಸ್.ಸಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 6ರ ವರೆಗೆ ಅವಧಿ ವಿಸ್ತರಿಸಲಾಗಿದೆ.
ವೆಬ್‍ಸೈಟ್ https://sevasindhuservices.karnataka.gov.in/login.do ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗೆ ಇಲಾಖೆಯ ವೆಬ್‍ಸೈಟ್ https://dom.karnataka.gov.in ಅಥವಾ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಲ್ಪಸಂಖ್ಯಾತರಿಗೆ ಪರೀಕ್ಷಾ ಪೂರ್ವ ತರಬೇತಿ: ಅವಧಿ ವಿಸ್ತರಣೆ









