(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಕರ್ನಾಟಕ ರಾಜ್ಯದಲ್ಲಿರುವ ಹಿಂದುಳಿದ ವರ್ಗಗಳು, ಇತರೆ ಜಾತಿಗಳು ಅನುಸೂಚಿತ ಜಾತಿ ಮತ್ತು ಪಂಗಡಗಳು ಸೇರಿದಂತೆ ಎಲ್ಲ ಜಾತಿಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸರ್ಕಾರದ ಆದೇಶಾನುಸಾರ ಕೈಗೊಂಡಿದೆ.
ಈ ಹಿನ್ನೆಲೆಯಲ್ಲಿ, ಹಿಂದುಳಿದ ವರ್ಗಗಳು ಮತ್ತು ಇತರೆ ಜಾತಿ/ಉಪಜಾತಿಗಳ ಬಗ್ಗೆ ಸಾರ್ವಜನಿಕರ ಮಾಹಿತಿಗಾಗಿ ಯಾವುದೇ ಜಾತಿ/ಉಪಜಾತಿಗಳು ಬಿಟ್ಟು ಹೋಗಿದ್ದಲ್ಲಿ, ಅಂತಹ ಅಂಶಗಳ ಬಗ್ಗೆ ಸಲಹೆ/ ಸೂಚನೆ, ಮನವಿಗಳನ್ನು ನೀಡಲು ಸೆಪ್ಟೆಂಬರ್ 1ರ ವರೆಗೆ ಅವಧಿ ವಿಸ್ತರಿಸಲಾಗಿದೆ. ಸಂಗ್ರಹಿಸಲಾದ ಜಾತಿ/ಉಪಜಾತಿಗಳ ಪಟ್ಟಿಯನ್ನು ಸೆಪ್ಟೆಂಬರ್ ತಿಂಗಳಲ್ಲಿ ಪ್ರಾರಂಭವಾಗಲಿರುವ ಸಮೀಕ್ಷೆಗಾಗಿ ಮಾತ್ರ ಉಪಯೋಗಿಸಲಾಗುತ್ತದೆ.
ಸಾರ್ವಜನಿಕರು ತಮ್ಮ ಸಲಹೆ/ಸೂಚನೆ/ ಮನವಿಗಳನ್ನು ಸದಸ್ಯ ಕಾರ್ಯದರ್ಶಿಗಳು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ, ನಂ.16, ಡಿ.ದೇವರಾಜ ಅರಸು ಭವನ, ಮಿಲ್ಲರ್ಸ್ ಟ್ಯಾಂಕ್ ಬಂಡ್ ಪ್ರದೇಶ, ವಸಂತ ನಗರ, ಬೆಂಗಳೂರು ಅಥವಾ kscbcb@gmail.com ಇ-ಮೇಲ್ ವಿಳಾಸಕ್ಕೆ ಕಳುಹಿಸಬಹುದು. ಹೆಚ್ಚಿನ ಮಾಹಿತಿಗೆ ದೂ.ಸಂಖ್ಯೆ 080-29506668 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.









