(ನ್ಯೂಸ್ ಕಡಬ) newskadaba.com, ಆಗಸ್ಟ್ 30 ಟೋಕಿಯೊ: 2 ದಿನಗಳ ಪ್ರವಾಸಕ್ಕಾಗಿ ಜಪಾನ್‌ನ ಟೋಕಿಯೊಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ (PM Modi Japan Visit) ಮೊದಲ ದಿನವೇ ಹಲವು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಿದರು. ಜತೆಗೆ ಅವರು ಜಪಾನ್ ಪ್ರಧಾನಿ ಶಿಗೇರು ಇಶಿಬಾ (Shigeru Ishiba) ಅವರೊಂದಿಗೆ ಟೋಕಿಯೊದಿಂದ ಸೆಂಡೈಗೆ ಬುಲೆಟ್ ರೈಲಿನಲ್ಲಿ ಪ್ರಯಾಣಿಸಿದರು. ಇಬ್ಬರೂ ನಾಯಕರು ತಮ್ಮ ರೈಲು ಪ್ರಯಾಣದ ಚಿತ್ರಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಸದ್ಯ ಈ ಫೋಟೊ ಗಮನ ಸೆಳೆದಿದೆ.
“ಪ್ರಧಾನಿ ಮೋದಿ ಅವರೊಂದಿಗೆ ಸೆಂಡೈಗೆ ಪಯಣ. ಶುಕ್ರವಾರ ರಾತ್ರಿಯಿಂದ ಅವರೊಂದಿಗೆ ಸಮಾಲೋಚನೆ ನಡೆಸುತ್ತಿದ್ದೇನೆʼʼ ಎಂದು ಶಿಗೇರು ಇಶಿಬಾ ಎಕ್ಸ್‌ನಲ್ಲಿ ಬರೆದಿದ್ದಾರೆ. ಪ್ರಧಾನಿ ಮೋದಿ ಕೂಡ ಫೋಟೊ ಹಂಚಿಕೊಂಡಿದ್ದಾರೆ. ಈ ಮೂಲಕ ಸೆಂಡೈಗೆ ತಲುಪಿರುವುದಾಗಿ ತಿಳಿಸಿದ್ದಾರೆ














