‘ದುರ್ಬಲವರ್ಗದವರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಪೊಲೀಸರು ತಡೆಗಟ್ಟಬೇಕು’- ಸಿಎಂ



(ನ್ಯೂಸ್ಕಡಬ) newskadaba.com, ಆಗಸ್ಟ್ 30 : ರಾಜ್ಯದಲ್ಲಿ ಜಾತಿವ್ಯವಸ್ಥೆಯಿದ್ದು, ಅನೇಕ ದುರ್ಬಲವರ್ಗದವರು ಜಾತಿ ತಾರತಮ್ಯವನ್ನು ಅನುಭವಿಸುತ್ತಿದ್ದಾರೆ. ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ದೌರ್ಜನ್ಯಗಳನ್ನು ತಡೆಗಟ್ಟಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.







ಅವರು ಇಂದು ರಾಜಭವನದ್ಲಿ ನಡೆದ , ರಾಜ್ಯ ಗೃಹ ಇಲಾಖೆಯಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಸರ್ಕಾರವು ಪ್ರತಿ ಜಿಲ್ಲೆಯಲ್ಲಿ ಡಿಸಿಆರ್ ಇ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗಿದೆ. ನಾನು ಇತ್ತೀಚೆಗೆ ನಡೆಸಿದ ಪರಿಶೀಲನಾ ಸಭೆಯಲ್ಲಿ ಡಿಸಿಆರ್ ಇ ಪೊಲೀಸ್ ಠಾಣೆಗಳ ಕಾರ್ಯ ಮತ್ತು ಪ್ರಗತಿ ತೃಪ್ತಿದಾಯಕವಿಲ್ಲ ಎಂಬುದನ್ನು ಗಮನಿಸಿದ್ದೇನೆ. ಇದನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ, ದುರ್ಬಲವರ್ಗದವರಿಗೆ ಸುರಕ್ಷತೆ ಒದಗಿಸುವ ಸರ್ಕಾರದ ಉದ್ದೇಶ ಸಫಲವಾಗಬೇಕು. ಇತರೆ ರಾಜ್ಯಗಳಿಗೆ ಹೋಲಿಸಿದರೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಠ ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳ ವಿರುದ್ಧ ಶಿಕ್ಷೆಯ ಪ್ರಮಾಣ ಬಹಳ ಕಡಿಮೆಯಿದೆ. ಈ ಬಗ್ಗೆ ಪೊಲೀಸರು ಗಮನಹರಿಸಬೇಕು ಎಂದರು.






error: Content is protected !!
Scroll to Top