ಊಟ ಮಾಡುವಾಗ ಗಂಟಲಲ್ಲಿ ಅನ್ನದ ಅಗುಳು ಸಿಲುಕಿ ಯುವಕ ಸಾವು



(ನ್ಯೂಸ್ಕಡಬ) newskadaba.com ಸೆ. 01. ಊಟ ಮಾಡುತ್ತಿದ್ದ ಸಂದರ್ಭ ಅನ್ನದ ಅಗಳು ಗಂಟಲಿನಲ್ಲಿ ಸಿಲುಕಿದ ಕಾರಣದಿಂದ ಉಸಿರುಗಟ್ಟಿ ಯುವಕನೊಬ್ಬ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಿಣಗಾದಲ್ಲಿ ನಡೆದಿದೆ.







ಮೃತ ಯುವಕನನ್ನು ಬಿಣಗಾ ಮಾಳಸವಾಡ ನಿವಾಸಿ, ಅಮಿತ್ ಮಾಳಸೇರ್ (38 )ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಕಾರು ಚಾಲಕರಾಗಿದ್ದ ಅಮಿತ್, ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ವೈದ್ಯರಿಂದ ಚಿಕಿತ್ಸೆ ಸಹ ಪಡೆಯುತ್ತಿದ್ದರು. ಅಮಿತ್ ಎಂದಿನಂತೆ ಭಾನುವಾರ ಮನೆಯಲ್ಲಿ ಊಟ ಮಾಡುತ್ತಿದ್ದಾಗ ಅನ್ನದ ಅಗಳೊಂದು ಗಂಟಲಲ್ಲಿ ಸಿಲುಕಿತ್ತು. ತಕ್ಷಣ ಮನೆಯವರು ಅಮಿತ್‌ಗೆ ನೀರು ಕುಡಿಸಿದ್ದು, ಆತ ಅಲ್ಲೇ ಕುಸಿದು ಬಿದಿದ್ದ. ಕೂಡಲೇ ಆತನನ್ನು ಅಂಬುಲೆನ್ಸ್ ಮೂಲಕ ಕಾರವಾರದ ಕಿಮ್ಸ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.






ಆದರೇ ಅಲ್ಲಿ ಪರೀಕ್ಷಿಸಿದ ವೈದ್ಯರು ಗಂಟಲಲ್ಲಿ ಅನ್ನದ ಅಗಳು ಸಿಲುಕಿ ಅಮಿತ್ ಮೃತಪಟ್ಟಿದ್ದಾನೆಂದು ದೃಢಪಡಿಸಿದ್ದಾರೆ. ಘಟನೆ ಸಂಬಂಧ ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!
Scroll to Top