ಸೈಲೆಂಟ್ ಆಗಿ ಹಸೆಮಣೆ ಏರಲು ಸಜ್ಜಾದ ಹಾಸ್ಯನಟ ‘ಚಿಕ್ಕಣ್ಣ’.!



(ನ್ಯೂಸ್ಕಡಬ) newskadaba.com, ಸೆ. 01. ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯನಟ ಚಿಕ್ಕಣ್ಣ ಹಸೆಮಣೆ ಏರಲು ಸಜ್ಜಾಗಿದ್ದು, ಕೊನೆಗೂ ಬ್ಯಾಚುಲರ್ ಲೈಫ್‌ ಗೆ ಗುಡ್‌ಬೈ ಹೇಳಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಯುವತಿ ಪಾವನಾ ಎಂಬವರ ಜೊತೆ ಚಿಕ್ಕಣ್ಣ ಮದುವೆ ನಡೆಯಲಿರುವುದಾಗಿ ವರದಿಯಾಗಿದೆ.





ಇತ್ತೀಚೆಗೆ ಚಿಕ್ಕಣ್ಣ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಈ ಜೋಡಿ ಒಟ್ಟಾಗಿ ಕಾಣಿಸಿಕೊಂಡು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿತ್ತು. ಹುಡುಗಿಯ ಮನೆಯಲ್ಲಿ ಹೂ ಮುಡಿಸುವ ಶಾಸ್ತ್ರ ನೆರವೇರಿದ್ದು, ಎರಡೂ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಮದುವೆ ಮಾತುಕತೆ ನಡೆದಿದೆ.






ಯುವತಿಗೆ ಹೂ ಮುಡಿಸಿ ಮದುವೆ ನಿಶ್ಚಯಿಸಲಾಗಿದ್ದು, ಮದುವೆಯ ದಿನಾಂಕ ಅಧಿಕೃತ ಘೋಷಣೆಯಾಗಿಲ್ಲ. ಈ ಹಿಂದೆ ಸಾಕಷ್ಟು ಬಾರಿ ಸೋಶಿಯಲ್ ಮೀಡಿಯಾದಲ್ಲಿ ಚಿಕ್ಕಣ್ಣ ಮದುವೆ ಬಗ್ಗೆ ಗುಲ್ಲೆಬ್ಬಿಸಿತ್ತು. ಬಳಿಕ ಅದೆಲ್ಲಾ ಸುಳ್ಳು ಎಂದು ಗೊತ್ತಾಗಿತ್ತು. ಕಳೆದ ವರ್ಷ ‘ಉಪಾಧ್ಯಕ್ಷ’ ಚಿತ್ರದ ಮೂಲಕ ಹೀರೋ ಆಗಿ ಚಿಕ್ಕಣ್ಣ ಅದೃಷ್ಟ ಪರೀಕ್ಷೆ ಮಾಡಿಕೊಂಡಿದ್ದರು. ಇದೀಗ ಕನ್ನಡ ಚಿತ್ರರಂಗ ಹಾಗೂ ಕಿರುತೆರೆಯಲ್ಲಿ ಮದುವೆ ಸಂಭ್ರಮ ಜೋರಾಗಿದೆ.

error: Content is protected !!
Scroll to Top