ಜಮ್ಮು ಕಾಶ್ಮೀರದಲ್ಲಿ ಉಗ್ರರ ಮೇಲೆ ಭಾರತೀಯ ಸೇನೆ ಗುಂಡಿನ ದಾಳಿ



(ನ್ಯೂಸ್ಕಡಬ) newskadaba.com,  ಸೆ.02 ಶ್ರೀನಗರ : ಒಳನುಸುಳಲು ಪ್ರಯತ್ನಿಸುತ್ತಿದ್ದ ಶಂಕಿತ ಉಗ್ರರ ಮೇಲೆ ಭಾರತೀಯ ಸೇನೆ ಗುಂಡಿನ ದಾಳಿ ನಡೆಸಿದ ಘಟನೆ ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ನಡೆದಿದೆ.







ಸೋಮವಾರ ಪೂಂಚ್ ಜಿಲ್ಲೆಯ ಮೆಂಧರ್ ಸೆಕ್ಟರ್ ಬಳಿಯ ನಿಯಂತ್ರಣ ರೇಖೆಯಲ್ಲಿ ಒಳನುಸುಳಲು ಪ್ರಯತ್ನಿಸುತ್ತಿದ್ದ ಶಂಕಿತ ಉಗ್ರರ ಮೇಲೆ ಭಾರತೀಯ ಸೇನಾಪಡೆ ಗುಂಡಿನ ದಾಳಿ ನಡೆಸಿದೆ” ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.






ಕಳೆದೊಂದು ತಿಂಗಳ ಅವಧಿಯಲ್ಲಿ ಭಾರೀ ಮಳೆಯಿಂದಾಗಿ ಹಠಾತ್ ಪ್ರವಾಹ ಉಂಟಾಗಿ ಜಮ್ಮು ಹಾಗೂ ಕಾಶ್ಮೀರದಲ್ಲಿ ತೀವ್ರ ಹಾನಿಯಾಗಿದೆ. ಈ ಹಿನ್ನೆಲೆ ಪ್ರವಾಹ ಪೀಡಿತ ಪ್ರದೇಶಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಇದೇ ವೇಳೆ ಉಗ್ರರು ಒಳನುಸುಳಲು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ.

ಸೋಮವಾರ ಬೆಳಿಗ್ಗೆ 5:30ರ ಸುಮಾರಿಗೆ ಬಾಲಕೋಟ್‌ನ ವೈಟ್ ನೈಟ್ ಕಾರ್ಪ್ಸ್ ಪಡೆಗಳು ಎಲ್‌ಒಸಿ ಬಳಿ ಅನುಮಾನಾಸ್ಪದ ಚಲನೆಯನ್ನು ಗಮನಿಸಿದರು. ತಕ್ಷಣವೇ ಗುಂಡಿನ ದಾಳಿ ನಡೆಸಿದ್ದಾರೆ. ಬಳಿಕ ಎರಡು ಕಡೆಯಿಂದಲೂ ಗುಂಡಿನ ಚಕಮಕಿ ನಡೆದಿದ್ದು, ಯಾವುದೇ ಸಾವು-ನೋವು ವರದಿಯಾಗಿಲ್ಲ ಎಂದು ತಿಳಿದುಬಂದಿದೆ.

ಇದಕ್ಕೂ ಮುನ್ನ ಭಾನುವಾರ (ಆ.31) ಪೂಂಚ್‌ನಲ್ಲಿ ಪೊಲೀಸರು ಇಬ್ಬರು ಶಸ್ತ್ರಸಹಿತ ಭಯೋತ್ಪಾದಕರನ್ನು ಬಂಧಿಸಲಾಗಿತ್ತು.

error: Content is protected !!
Scroll to Top