ಅಮೆರಿಕದ ಟೆಕ್ಸಾಸ್‌ನಲ್ಲಿ ಭೀಕರ ಅಪಘಾತದಲ್ಲಿ ಕೋಲಾರ ಮೂಲದ ಬಾಡಿ ಬಿಲ್ಡರ್ ಸಾವು



(ನ್ಯೂಸ್‌ ಕಡಬ)com, ಸೆ.02 ಕೋಲಾ : ಅಮೆರಿಕದ ಟೆಕ್ಸಾಸ್‌ನಲ್ಲಿ ನಡೆದ ಭೀಕರ ಅಪಘಾತದಲ್ಲಿ ಕೋಲಾರದ ಗಾಂಧಿನಗರ ಬಡಾವಣೆಯ ಬಾಡಿ ಬಿಲ್ಡರ್ ಒಬ್ಬರು ಸಾವನ್ನಪ್ಪಿದ್ದಾರೆ.





ನಗರದ ನಿವಾಸಿ ಸುರೇಶ್ ಕುಮಾರ್ (42) ಮೃತ ದುರ್ದೈವಿ.






ಇವರು ಗಾಂಧಿನಗರದ ಚಲಪತಿ ಹಾಗೂ ಮುನಿಯಮ್ಮ ದಂಪತಿಯ ಪುತ್ರ. ಸುರೇಶ್, ಮೂರು ದಿನಗಳ ಹಿಂದೆ ಫ್ಲೋರಿಡಾ – ಟೆಕ್ಸಾಸ್‌ನಲ್ಲಿ ನಡೆದಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಅವರು ಮಾಡೆಲಿಂಗ್ ಜೊತೆ ಕನ್ನಡದ ಹಲವು ನಟ ನಟಿಯರಿಗೆ ದೈಹಿಕ ತರಬೇತಿಯನ್ನೂ ಕೂಡ ನೀಡಿದ್ದರು. ಅವರು ದೆಹಲಿ ಮೂಲದ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದರು

error: Content is protected !!
Scroll to Top